ರಾಜ್ಯ

'ಭಗವಾನ್, ಪ್ರತಾಪ್ ಸಿಂಹ ಅನಂತ್ ಕುಮಾರ್ ಹೆಗಡೆ', ನಿಮ್ಮ ನಾಲಗೆ ನಿಯಂತ್ರಣದಲ್ಲಿರಲಿ: ಪಾಟೀಲ್ ವಾರ್ನಿಂಗ್

Shilpa D
ವಿಜಯಪುರ: ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ, ಕೋಮು ಸಾಮರಸ್ಯ ಕದಡುವ ಹೇಳಿಕೆಗಳನ್ನುಯಾರೇ ನೀಡಿದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ,
ಪ್ರಗತಿಪರ ಚಿಂತಕ ಭಗವಾನ್, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹಾಗೂ ಸಂಸದರಾದ ಪ್ರತಾಪ್ ಸಿಂಹ ,  ಬಸವನಗೌಡ ಪಾಟೀಲ್ ಯತ್ನಾಳ್, ಪತ್ರಕರ್ತ ಅಜಿತ್ ಹನುಮಕ್ಕನವರ್ ಸೇಗಿದಂತೆ ಯಾರೇ ವಿವಾದಾತ್ಮಕ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದರೂ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಗೃಹ ಸಚಿವ ಎಂ.ಬಿ.ಪಾಟೀಲ್ ವಾರ್ನಿಂಗ್ ಮಾಡಿದ್ದಾರೆ.
ವಿಜಯನಗರದಲ್ಲಿ ಮಾತನಾಡಿದ ಎಂ.ಬಿ.ಪಾಟೀಲ್, ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸಿಆರ್ ಪಿಎಫ್ ಯೋಧರ ಮೇಲಿನ ದಾಳಿಯನ್ನು ಬೆಂಬಲಿಸಿದ ಕಾಶ್ಮೀರ ಮೂಲದ ಯುವಕನ ವಿಚಾರಣೆ ನಡೆಸಲಾಗುತ್ತದೆ ಎಂದು ಹೇಳಿದ ಅವರು ಕಾನೂನುಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ,
ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಮತಗಳ ಧ್ರುವೀಕರಣಕ್ಕಾಗಿ ಇಂಥಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
SCROLL FOR NEXT