ಸಾಂದರ್ಭಿಕ ಚಿತ್ರ 
ರಾಜ್ಯ

ಪುಲ್ವಾಮಾ ದಾಳಿ: ದೇಶದ್ರೋಹ ಪ್ರಕರಣದಡಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಸೆರೆ

ಸಾಮಾಜಿಕ ಜಾಲತಾಣದಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿದ್ದ ಸಹಪಾಠಿ ಮೇಲೆ ಹಲ್ಲೆ ನಡೆಸಿದ ಜಮ್ಮು- ಕಾಶ್ಮೀರ ಮೂಲದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:ಪುಲ್ವಾಮಾದಲ್ಲಿ ನಡೆದ ಯೋಧರ ಹತ್ಯೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿದ್ದ ಸಹಪಾಠಿ ಮೇಲೆ  ಹಲ್ಲೆ ನಡೆಸಿದ ಜಮ್ಮು- ಕಾಶ್ಮೀರ ಮೂಲದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಹೊರವಲಯ ಸೂರ್ಯನಗರ ಪೊಲೀಸರು ಬಂಧಿಸಿದ್ದಾರೆ.

ಜಮ್ಮು ಕಾಶ್ಮೀರದ ಗ್ರಾಮದ ಹ್ಯಾರಿಸ್ ಮಂಜೂರ್ ಸೊಪೋರೆ ಗ್ರಾಮದ ಗೌಹಾರ್ ಮುಷ್ತಾಕ್, ಹಾಗೂ ಕುಪ್ವಾರಾ ಗ್ರಾಮದ ಜಾಹೀರ್ ಮುಕ್ ಬುಲ್ ಬಂಧಿತರು.

ಪಶ್ಚಿಮ ಬಂಗಾಳ ಮೂಲದ ಕೌಶಿಕ್ ದೆಬ್ ನಾಥ್ ಹಲ್ಲೆಗೊಳಗಾಗಿದ್ದು, ಕಾಲೇಜು ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂವರು ಆರೋಪಿಗಳನ್ನು ಬೆಂಗಳೂರು ಹೊರವಲಯದ ಮರಸೂರು ಗೇಟ್ ಬಳಿಯಿರುವ ಸ್ಪೂರ್ತಿ ಎಂಬ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್  ವ್ಯಾಸಂಗ ಮಾಡುತ್ತಿದ್ದಾರೆ. ಇದೇ ಕಾಲೇಜಿನಲ್ಲಿ ಪಶ್ಚಿಮ ಬಂಗಾಳ ಮೂಲದ ಕೌಶಿಕ್ ದೆಬ್ ನಾಥ್ ಕೂಡಾ ವ್ಯಾಸಂಗ ಮಾಡುತ್ತಿದ್ದಾನೆ.

ಪುಲ್ವಾಮಾದಲ್ಲಿ ನಡೆದ ಹತ್ಯೆಯನ್ನು ವಿರೋಧಿಸಿ ಕೌಶಿಕ್ ಹುತಾತ್ಮ ಯೋಧರ ಕುರಿತು ಪೋಟೋವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿದ್ದರು. ಈ ಪೋಸ್ಟ್ ನೋಡಿದ ಮೂವರು ಆರೋಪಿಗಳು ಯೋಧರ ಕುರಿತ ಅವಹೇಳನಕಾರಿ ಹೇಳಿಕೆ ನೀಡಿದರಲ್ಲದೇ, ದೆಬ್ ನಾಥ್ ಮೇಲೆ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಗಾಯಾಳು ಹೇಳಿಕೆ ಹಾಗೂ ಫೇಸ್ ಬುಕ್  ಸ್ಟೇಟಸ್ ಆಧಾರದ ಮೇಲೆ ಆರೋಪಿಗಳ  ವಿರುದ್ಧ  1967ರ ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತೀಯ ಸೈನಿಕರ ವಿರುದ್ಧ ಅವಹೇನಕಾರಿ ಹೇಳಿಕೆ ಹಾಗೂ ಪಾಕಿಸ್ತಾನ ಪರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದನ್ನು ಮೂವರು ಆರೋಪಿಗಳನ್ನು ವಿಚಾರಣೆ ವೇಳೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ