ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರೇಮಿಗಳ ದಿನ ಬ್ಯಾಗ್ ನಲ್ಲಿದ್ದ ಪ್ರೇಮಪತ್ರ ಶಿಕ್ಷಕರ ಕೈಗೆ ಸಿಕ್ಕಿದ್ದರಿಂದ ವಿದ್ಯಾರ್ಥಿ ಆತ್ಮಹತ್ಯೆ

ಪ್ರೇಮಿಗಳ ದಿನದಂದು ಸ್ಕೂಲ್ ಬ್ಯಾಗ್ ನಲ್ಲಿದ್ದ ಪ್ರೇಮ ಪತ್ರ ಶಿಕ್ಷಕರ ಕೈಗೆ ಸಿಕ್ಕಿದ್ದರಿಂದ ಭೀತಿಗೊಂಡ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು:ಪ್ರೇಮಿಗಳ ದಿನದಂದು ಸ್ಕೂಲ್ ಬ್ಯಾಗ್ ನಲ್ಲಿದ್ದ ಪ್ರೇಮ ಪತ್ರ ಶಿಕ್ಷಕರ ಕೈಗೆ ಸಿಕ್ಕಿದ್ದರಿಂದ ಭೀತಿಗೊಂಡ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
 
ಸಿದ್ದೇಶ್ ಮೃತ ವಿದ್ಯಾರ್ಥಿಯಾಗಿದ್ದಾನೆ.8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿ ಪೋಷಕರ ಬಗ್ಗೆ ಹೆದರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ.

ಸಿದ್ದೇಶ್ ಪೋಷಕರಾದ ಸಿದ್ದರಾಜು ಮತ್ತು ಸಣ್ಣಮ್ಮ ರತ್ನ ಆಂಧ್ರಪ್ರದೇಶದಿಂದ ವಲಸೆ ಬಂದವರಾಗಿದ್ದು, ಕೆಂಗನಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ.  ಈ ದಂಪತಿ ಕೂಲಿ ಕಾರ್ಮಿಕರಾಗಿ ಬದುಕು ಸಾಗಿಸುತ್ತಿದ್ದಾರೆ.

ಸಿದ್ದೇಶ್  9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳನ್ನು ಇಷ್ಟಪಟ್ಟು ಪ್ರೇಮಿಗಳ ದಿನದಂದು ಆಕೆಗೆ ಕೊಡಬೇಕೆಂದು ಪತ್ರ ಬರೆದು ತನ್ನ ಬ್ಯಾಗ್ ನಲ್ಲಿಟ್ಟುಕೊಂಡಿದ್ದ. ಬ್ಯಾಗ್ ತಪಾಸಣೆ ವೇಳೆಯಲ್ಲಿ ಶಿಕ್ಷಕರಿಗೆ ಕೈಗೆ ಪತ್ರ ದೊರೆತಿದ್ದು ಪ್ರಶ್ನಿಸಲು ಶುರು ಮಾಡಿದ್ದಾರೆ  ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆಗ ಏನನ್ನೂ ಪ್ರತಿಕ್ರಿಯಿಸಿದ್ದರಿಂದ ಮಾರನೆ ದಿನ ತಂದೆಯನ್ನು ಕರೆದುಕೊಂಡು ಬರುವಂತೆ ಸಿದ್ದೇಶ್ ಗೆ ಹೇಳಿದ್ದರಿಂದ ಭೀತಿಗೊಂಡ ಆತ ಶಾಲೆಯ ಬಳಿ ಇರುವ ಫಾರ್ಮ್ ಗೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತದೇಹವನ್ನು ನೋಡಿದ ಗ್ರಾಮಸ್ಥರು ಮಾದನಾಯಕನಹಳ್ಳಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.  ವಿಚಾರಣೆ ನಡೆಸುತ್ತಿರುವ ಪೊಲೀಸರು ಪ್ರಿನ್ಸಿಪಾಲರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT