ರಾಜ್ಯ

ತುಮಕೂರು ಬಳಿ ಸಿ ಟಿ ರವಿ ಕಾರು ಅಪಘಾತ: ಬಿಜೆಪಿ ಹೇಳಿದ್ದೇನು?

ಬಿಜೆಪಿ ಶಾಸಕ ಸಿ ಟಿ ರವಿ ಅವರು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಊರ್ಕೇನ ಹಳ್ಳಿ ...

ಬೆಂಗಳೂರು: ಬಿಜೆಪಿ ಶಾಸಕ ಸಿ ಟಿ ರವಿ ಅವರು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಊರ್ಕೇನ ಹಳ್ಳಿ ಸಮೀಪ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸಿ ಟಿ ರವಿಯವರ ಪರವಾಗಿ ಹೇಳಿಕೆ ನೀಡಿದೆ.

ಕೆಲವು ಮಾಧ್ಯಮಗಳಲ್ಲಿ ಘಟನೆಯ ನಂತರ ಸಿಟಿ ರವಿ ಬೇರೊಂದು ಕಾರಿನಲ್ಲಿ ಅಪಘಾತಕ್ಕೀಡಾದವರನ್ನು ವಿಚಾರಿಸದೆ ಬೆಂಗಳೂರಿಗೆ ಪರಾರಿಯಾದರು ಎಂದು ವರದಿ ಮಾಡಲಾಗಿತ್ತು.

ಇದಕ್ಕೆ ಸ್ಪಷ್ಟನೆ ನೀಡಿರುವ ರಾಜ್ಯ ಬಿಜೆಪಿ ಮಾಧ್ಯಮ ಘಟಕ, ದುರದೃಷ್ಟವಶಾತ್ ಈ ಘಟನೆ ಸಂಭವಿಸಿತು. ಮೃತರ ಕುಟುಂಬಕ್ಕೆ ನಾವು ಸಾಂತ್ವನ ಕೋರುತ್ತೇವೆ. ಆದರೆ ಘಟನೆಯ ನಂತರ ಸಿಟಿ ರವಿ ಅವರು ಮೃತರ ದೇಹವನ್ನು ಪೊಲೀಸರು ವಶಕ್ಕೆ ಪಡೆಯುವವರೆಗೂ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವವರೆಗೂ ಜೊತೆಯಲ್ಲೇ ಇದ್ದರು. ಅವರು ಎಲ್ಲಿಯೂ ಪರಾರಿಯಾಗಿರಲಿಲ್ಲ ಎಂದು ಹೇಳಿದೆ.

ಅಪಘಾತವಾಗುವಾಗ ಸಿಟಿ ರವಿ ಅವರು ಕಾರು ಚಾಲನೆ ಮಾಡುತ್ತಿರಲಿಲ್ಲ. ಅವರಿಗೆ ಯಾವುದೇ ಕುಡಿತದ ಅಭ್ಯಾಸವೂ ಇಲ್ಲ. ಅವರಿಗೂ ಎದೆಗೆ ಗಾಯವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ ಎಂದು ಬಿಜೆಪಿ ಹೇಳಿದೆ.

ಪೊಲೀಸ್ ಇನ್ಸ್ ಪೆಕ್ಟರ್ ಅವರು ಘಟನಾ ಸ್ಥಳದಿಂದ ಹೋಗಲು ಅನುಮತಿ ನೀಡಿದ ನಂತರವೇ ಸಿಟಿ ರವಿ ಅವರು ಅಲ್ಲಿಂದ ಹೊರಟಿದ್ದಾರೆ. ಸಿಟಿ ರವಿ ಅವರಿದ್ದ ಕಾರನ್ನು ಪೊಲೀಸರು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆದಿದ್ದಾರೆ. ರವಿ ಅವರಿಗೆ ಈಗಲೂ ಎದೆ ನೋವಿದ್ದು, ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!