ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ಪುಲ್ವಾಮಾ ನರಮೇಧಕ್ಕೆ ಪ್ರತೀಕಾರವೇ ಪರಿಹಾರವಲ್ಲ- ಕುಮಾರಸ್ವಾಮಿ

ಪುಲ್ವಾಮಾ ನರಮೇಧಕ್ಕೆ ಶೀಘ್ರದಲ್ಲಿಯೇ ತಕ್ಕ ಪ್ರತ್ಯುತ್ತರ ನೀಡುವುದಾಗಿ ಕೇಂದ್ರ ಸರ್ಕಾರ ಹೇಳುತ್ತಿದ್ದರೆ, ಪ್ರತಿಕಾರವೇ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು: ಪುಲ್ವಾಮಾ ನರಮೇಧಕ್ಕೆ  ಶೀಘ್ರದಲ್ಲಿಯೇ ತಕ್ಕ ಪ್ರತ್ಯುತ್ತರ ನೀಡುವುದಾಗಿ  ಕೇಂದ್ರ ಸರ್ಕಾರ ಹೇಳುತ್ತಿದ್ದರೆ, ಪ್ರತಿಕಾರವೇ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,  ಹೇಯದಾಳಿ ನಡೆಸಿದ ಉಗ್ರರಿಗೆ ಸೂಕ್ತ ಉತ್ತರ ನೀಡುವುದರಿಂದ ಹುತಾತ್ಮ ಯೋಧರ ಜೀವವನ್ನು ಮತ್ತೆ ತರಲು ಸಾಧ್ಯವಿಲ್ಲ. ಕಾಶ್ಮೀರದಲ್ಲಿ  ಅನುಕೂಲಕರ ವಾತವಾರಣ ನಿರ್ಮಾಣ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇದು ದಾಳಿ, ಪ್ರತಿದಾಳಿಯ ವಿಚಾರವಲ್ಲ, ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಂದ ಅಮಾಯಕ ಜನರು ಬಲಿಯಾಗುತ್ತಿದ್ದಾರೆ.ಪ್ರತಿಕಾರದಿಂದ ಹುತಾತ್ಮ ಯೋಧರ ಜೀವನ್ನು ಮತ್ತೆ ತರಲು ಸಾಧ್ಯವಿಲ್ಲ, ಕಣಿವೆ ರಾಜ್ಯದಲ್ಲಿ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಬೇಕಿದೆ. ಇದು ಕೇಂದ್ರ ಸರ್ಕಾರದಿಂದ ಆಗಬೇಕಿದೆ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದರು.

ಮುಂದೆ ಇಂತಹ ಘಟನೆ ಮರುಕಳಿಸದಂತೆ  ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ . ದೇಶದಲ್ಲಿ ಭಯೋತ್ಪಾದನೆ ನಿರ್ಮೂಲನೆ ನಿಟ್ಟಿನಲ್ಲಿ ನಾವು ಮೊದಲ ಆದ್ಯತೆ ನೀಡಬೇಕಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!