ಕಲಬುರಗಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಹಾಗೂ ಕುರಾನ್ ಗ್ರಂಥ ಕುರಿತು ಅವಹೇಳನಕಾರಿ ಪ್ರಚಾರ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾವರಗೇರಾ ಕ್ರಾಸ್ ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ನ 30 ವರ್ಷದ ಜಲಾಲ್ ಕೊಲೆಯಾದ ಧರ್ಮ ಪ್ರಚಾರಕ. ಇತ ಕಳೆದ ಐದಾರು ತಿಂಗಳಿನಿಂದ ಕಲಬುರಗಿಯಲ್ಲಿ ಪಾಕಿಸ್ತಾನದ ಅಹ್ಮದ್ ಇಸಾ ಪಂಥದ ಪ್ರಚಾರ ಮಾಡುತ್ತಿದ್ದ. ಇದರಿಂದ ಕೋಪಗೊಂಡ 20ಕ್ಕೂ ಹೆಚ್ಚು ಯುವಕರ ತಂಡ ಆತನ ಕತ್ತು ಸೀಳಿ ಕೊಲೆ ಮಾಡಿದ್ದಾರೆ.
ಈ ಸಂಬಂಧ ಪೊಲೀಸರು 14 ಜನರನ್ನು ಬಂಧಿಸಿದ್ದಾರೆ. ಜಲಾಲ್ ನನ್ನು ತಾಜಸುಲ್ತಾನಪುರ ಬಳಿ ಕರೆದೊಯ್ದು ನಂತರ ತಾವರಗೇರಾ ಕ್ರಾಸ್ ಬಳಿ ಕುತ್ತಿಗೆ, ಹೊಟ್ಟೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಕೊಲೆ ಮಾಡಿದ ಯುವಕರು ಸುನ್ನಿ ಮತ್ತು ಶಿಯಾ ಪಂಗಡಕ್ಕೆ ಸೇರಿದವರಾಗಿದ್ದಾರೆ.