ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಚಾಕುವಿನಿಂದ ಇರಿದು ಗ್ರಾಮಪಂಚಾಯ್ತಿ ಸದಸ್ಯನ ಕೊಲೆ

ಚಾಕುವಿನಿಂದ ಇರಿದು ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಚಾಕುವಿನಿಂದ ಇರಿದು ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ. 
ತಿಮ್ಮೇಗೌಡ ಕೊಲೆಯಾದ ಗ್ರಾಮ ಪಂಚಾಯ್ತಿ ಸದಸ್ಯರಾಗಿದ್ದು, ಕಳೆದ ರಾತ್ರಿ ಚಿಕ್ಕಾಡೆ ಗ್ರಾಮದಲ್ಲಿ ದೇವೀರಮ್ಮನ ಜಾತ್ರೆ ನಡೆಯುತ್ತಿತ್ತು. ವರ್ಷಕ್ಕೊಮ್ಮೆ ಈ ದೇಗುಲದ ಬಾಗಿಲು ತೆರೆಯಲಾಗುತ್ತಿತ್ತು. ಗ್ರಾಮದ ಜನತೆ ಜಾತ್ರೆಯ ಸಂಭ್ರಮದಲ್ಲಿದ್ದರು. 
ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ತಿಮ್ಮೇಗೌಡ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!