ಶಾರದಮ್ಮ ಮಹಾದೇವಪ್ಪ 
ರಾಜ್ಯ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ,ಮಾಜಿ ಶಾಸಕಿ ಶಾರದಮ್ಮ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಮಾಜಿ ಶಾಸಕಿ ಶಾರದಮ್ಮ ಮಹಾದೇವಪ್ಪ ಪಟ್ಟಣ್ (97) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ....

ಬೆಳಗಾವಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಮಾಜಿ ಶಾಸಕಿ ಶಾರದಮ್ಮ ಮಹಾದೇವಪ್ಪ ಪಟ್ಟಣ್ (97) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಮದುರ್ಗದಿಂದ ಅವರು 1967-72ರ ಅವಧಿಯಲ್ಲಿ ಪ್ರಥಮ ಮಹಿಳಾ ಶಾಸಕಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು.
ಶಾರದಮ್ಮ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಶಾಸಕ ದಿ.ಮಹದೇವಪ್ಪ ಪಟ್ಟಣ್ ಅವರ ಪತ್ನಿಯಾಗಿದ್ದಾರೆ.
ಮಹದೇವಪ್ಪ ಪಟ್ಟಣ್ ಅವರು ಕಳೆದ ವರ್ಷವಷ್ಟೇ ನಿಧನರಾಗಿದ್ದರು. 2013ರಲ್ಲಿ ರಾಮದುರ್ಗ ಕ್ಷೇತ್ರದಿಂದ ಅವರ ಪುತ್ರ ಅಶೋಕ್‍ ಪಟ್ಟಣ್ ವಿಧಾನಸಭೆಗೆ ಆಯ್ಕೆಯಾಗಿದ್ದರು. ಆದರೆ 2018ರ ಚುನಾವಣೆಯಲ್ಲಿ ಸೋಲನುಭವಿಸಿದ್ದರು.
ಇಂದು ಸಂಜೆ ರಾಮದುರ್ಗದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ