ಹಾಸನ: ಕಟ್ಟಡಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಸಹೊರವಲಯದಲ್ಲಿ ನಡೆದಿದೆ.
ಬೆಂಗಳೂರಿನ ಚಿಕ್ಕಬಾಣಾವರ ನಿವಾಸಿಯಾದ ವಿವೇಕ್ ನಾಯಕ್ ಹಾಗೂ ಅವರ ಪತ್ನಿ ರೇಷ್ಮಾ ನಾಯಕ್ ಹಾಗೂ ಅವರ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದಾರೆ, ಕಾರಿನ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಬೆಂಗಳೂರಿನಿಂದ ಹಾಸನದ ಕಡೆಗೆ ಕಾರು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.