ರಾಜ್ಯ

ಆಡಿಯೋ ಟೇಪ್ ಪ್ರಕರಣ: ಬಿಎಸ್ ವೈ ಸೇರಿ ನಾಲ್ವರ ವಿರುದ್ಧದ ಎಫ್ ಐ ಆರ್ ಗೆ ಕೋರ್ಟ್ ಮಧ್ಯಂತರ ತಡೆ

Shilpa D
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾಡಲಾಗಿದ್ದ ಆಪರೇಷನ್ ಬಿಜೆಪಿ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ ಐ ಆರ್ ಗೆ ಮಧ್ಯಂತರ ತಡೆ ನೀಡಲಾಗಿದೆ.
ಬಿಎಸ್ ವೈ ಸೇರಿ ನಾಲ್ವರ ವಿರುದ್ಧ  ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸರು ದಾಖಲಿಸಿದ್ದ ಎಫ್ ಐ ಆರ್ ಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ. 
ಆಪರೇಷನ್‌ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್‌ ನ ಕಲಬುರಗಿ ಪೀಠ ತೀರ್ಪನ್ನುಇಂದಿಗೆ ಕಾಯ್ದಿರಿಸಿತ್ತು. ಶಾಸಕರಾದ ಪ್ರೀತಂ ಗೌಡ, ಶಾಸಕ ಶಿವನಗೌಡ ನಾಯಕ ಹಾಗೂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಎಂ.ಬಿ.ಮರಮಕಲ್‌ ಪರವಾಗಿ ವಕೀಲ ಅಶೋಕ ಹಾರನಹಳ್ಳಿ ವಾದಿಸಿದರು. ವಾದ ಆಲಿಸಿದ ನ್ಯಾಯಮೂರ್ತಿ ಪ್ರಲ್ಹಾದ್‌ ಗೋವಿಂದರಾವ್‌ ಮಾಲೀಪಾಟೀಲ್‌ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ.
SCROLL FOR NEXT