ರಾಜ್ಯ

ಏರ್ ಶೋ ವೇಳೆ ಅಗ್ನಿ ಅವಘಡ: ಯಾವುದೇ ಜೀವಹಾನಿ ಆಗಿಲ್ಲ, ಆತಂಕ ಪಡುವ ಅಗತ್ಯವಿಲ್ಲ - ಸಿಎಂ

Lingaraj Badiger
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ - 2019ರ ಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ವಾಹನಗಳಿಗೆ ಸುಟ್ಟು ಕರಕಲಾಗಿವೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಏರ್ ಶೋ ಪ್ರದರ್ಶನ ಮತ್ತೆ ಆರಂಭವಾಗಿದೆ.
ಘಟನೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಏರೋ ಇಂಡಿಯಾ ಶೋ ವೇಳೆ ಅಗ್ನಿ ಅವಘಡ ಸಂಬಂಧ ಆತಂಕಪಡುವ ಅಗತ್ಯವಿಲ್ಲ. ಯಾವುದೇ ಜೀವಹಾನಿಯಾಗಿಲ್ಲ. ವಾಹನಗಳು ಬೆಂಕಿಯಲ್ಲಿ ಸುಟ್ಟುಹೋಗಿರುವ ಬಗ್ಗೆ ವರದಿಯಾಗಿದ್ದು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಅಗ್ನಿಶಾಮಕ ವರಿಷ್ಠರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.
ಇಂದು ಬೆಳಗ್ಗೆ ಗೇಟ್ ಬಳಿಯಿದ್ದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ದಟ್ಟ ಹೊಗೆ ಆವರಿಸಿತು. ಇದರಿಂದಾಗಿ ಕೆಲಕಾಲ ವೈಮಾನಿಕ ಹಾರಾಟ ಪ್ರದರ್ಶನವನ್ನು ರದ್ದು ಪಡಿಸಲಾಯಿತು. ಅಲ್ಲದೆ ಕೆಲಕಾಲ ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು.
ಒಣ ಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು 10 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
SCROLL FOR NEXT