ಐಶ್ವರ್ಯಾ ರೈ 
ರಾಜ್ಯ

ಹುಟ್ಟೂರು ಮಂಗಳೂರಿಗೆ ಆಗಮಿಸಿದ ಐಶ್ವರ್ಯಾ ರೈ ಬಚ್ಚನ್

ಮಾಜಿ ವಿಶ್ವ ಸುಂದರಿ, ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಅವರು ಇಂದು ಕದಲತಡಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ.

ಮಂಗಳೂರು: ಮಾಜಿ ವಿಶ್ವ ಸುಂದರಿ, ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಅವರು ಇಂದು ಕದಲತಡಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ.

ಐಶ್ವರ್ಯಾ ರೈ ಅವರು ತಮ್ಮ ಪತಿ ನಟ ಅಭಿಷೇಕ್ ಬಚ್ಚನ್ ಅವರೊಂದಿಗೆ ಮಂಗಳೂರಿಗೆ ಬಂದಿದ್ದು, ಇತ್ತೀಚಿಗೆ ನಿಧನರಾದ ತಮ್ಮ ಚಿಕ್ಕಪ್ಪ  ದೀನನಾಥ್ ಶೆಟ್ಟಿ ಅವರ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕದ್ರಿ ದೇವಸ್ಥಾನದಲ್ಲಿ  ಚಿಕ್ಕಪ್ಪ ದೀನನಾಥ್  ಶ್ರಾದ್ಧದಲ್ಲಿ ಪಾಲ್ಗೊಂಡ ಬಳಿಕ ವಾಪಾಸ್  ಮುಂಬೈಗೆ ಐಶ್ವರ್ಯಾ ಹಾಗೂ ಅಭಿಷೇಕ್ ಜೋಡಿ ಪ್ರಯಾಣ ಬೆಳೆಸಲಿದ್ದಾರೆ ಎಂಬುದು ಅವರ ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ನಟಿ ಐಶ್ವರ್ಯಾ ರೈ  ಅವರು ಮೂಲತ: ಮಂಗಳೂರಿನವರು. ಅವರ ಹತ್ತಿರದ ಕುಟುಂಬಸ್ಥರು ಈಗಲೂ ಮಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾದ ಬಳಿಕ ಐಶ್ವರ್ಯಾ ರೈ ಮುಂಬೈಯಲ್ಲಿಯೇ ವಾಸಿಸುತ್ತಿದ್ದಾರೆ.

ಐಶ್ವರ್ಯಾ ರೈ ಹಾಗೂ ಅಭಿಷೇಕ್  ದಂಪತಿಗೆ ಆರಾಧ್ಯ ಎಂಬ ಮಗಳಿದ್ದಾಳೆ. ಆದರೆ, ಮಂಗಳೂರಿಗೆ ಆಕೆ ಬಂದಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT