ರಾಜ್ಯ

ಬಂಡೀಪುರದಲ್ಲಿ ಕಾಳ್ಗಿಚ್ಚು: ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ವೈಮಾನಿಕ ಸಮೀಕ್ಷೆ

Raghavendra Adiga
ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕಾಳ್ಗಿಚ್ಚು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಹಲವು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬುಧವಾರದಂದು ಕಾಳ್ಗಿಚ್ಚಿನಿಂದ ಆವೃತವಾಗಿದ್ದ ಬಂಡೀಪುರ ಹಾಗೂ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಕಳೆದ ಐದಾರು ದಿನಗಳಿಂದ ಬಂಡೀಪುರ, ತಮಿಳುನಾಡಿನ ಮಧುಮಲೈ, ಮನುಗುಡಿ ಪ್ರದೇಶ ಸೇರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂ<ಕಿ ವ್ಯಾಪಕವಾಗಿ ಆವರಿಸಿದೆ.ಗೋಪಾಲಸ್ವಾಮಿ ಬೆಟ್ತ ಹಾಗೂ ಅದರ ಮೂಲಕ ಕೇರಳ ಗಡಿ ಭಾಗದವರೆಗೆ ಬೆಂಕಿ ವ್ಯಾಪಿಸಿದೆ.
ಈ ಹಿನ್ನೆಲೆಯಲ್ಲಿ ಬೆಂಕಿ ಆರಿಸಲು ಅರಣ್ಯ ಸಿಬ್ಬಂದಿ, ನೂರಾರು ಸ್ವಯಂ ಸೇವಕರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ.ಸರ್ಕಾರ ಹೆಲಿಕಾಪ್ಟರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಮುಂದಾಗಿದೆ. ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
SCROLL FOR NEXT