ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆಯಿಂದ ದ್ವಿತೀಯ ಪ್ರಿಯುಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಮಾರ್ಚ್ 18ರವರೆಗೂ ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ  ಮಾರ್ಚ್ 18ರವರೆಗೂ ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಈ ವರ್ಷ 3, 38, 868 ವಿದ್ಯಾರ್ಥಿಗಳು, 3,34,738 ವಿದ್ಯಾರ್ಥಿನಿಯರೂ ಸೇರಿದಂತೆ ಒಟ್ಟು 6, 73, 606 ವಿದ್ಯಾರ್ಥಿಗಳು 1013 ಕೇಂದ್ರಗಳಲ್ಲಿ  ಪರೀಕ್ಷೆ ಬರೆಯಲಿದ್ದಾರೆ.  ಈ ಪೈಕಿ 5, 60, 395 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಬರೆಯಲಿದ್ದಾರೆ.

ವಿದ್ಯಾರ್ಥಿಗಳು ಯಾವುದೇ ಅಡ್ಡಿ ಆತಂಕವಿಲ್ಲದೆ ನಿರಾತಂಕವಾಗಿ ಪರೀಕ್ಷೆ ಬರೆಯಲು ಮಂಡಳಿ ಎಲ್ಲ ಸಿದ್ದತೆಗಳನ್ನು ಅಂತಿಮಗೊಳಿಸಿದೆ.  ಪರೀಕ್ಷಾ ಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲೆಡೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು  2026 ವಿಶೇಷ ಮೇಲ್ವಿಚಾರಕರು, ಜಿಲ್ಲಾಮಟ್ಟದಲ್ಲಿ ಸ್ವ್ಕಾಡ್ ಗಳನ್ನು ನಿಯೋಜಿಸಲಾಗಿದೆ. ಈ ಬಾರಿ 54 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ.

ಇದೇ ಮೊದಲ ಬಾರಿಗೆ ಆನ್ ಲೈನ್ ಮೂಲಕ ಮೌಲ್ಯಮಾಪನ ಮಾಡಿದ ಅಂಕಗಳು ಕೇಂದ್ರದಿಂದಲೇ ನೇರವಾಗಿ ಅಪ್ ಲೋಡ್ ಆಗಲಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್  ಟ್ರಾಕಿಂಗ್ ಸಿಸ್ಟಮ್ ಅಳವಡಿಸಲಾಗಿದ್ದು, ಉತ್ತರ ಪತ್ರಿಕೆ ಕೊಠಡಿಗಳಿಗೆ 24 ಗಂಟೆಗಳ ಕಾಲ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT