ಮೆಟ್ರೋ ರೈಲು 
ರಾಜ್ಯ

ಬೈಯಪ್ಪನಹಳ್ಳಿವರೆಗೆ ಮೆಟ್ರೋ ರೈಲು ಸಂಚಾರ ಪುನರ್ ಆರಂಭ

ನೇರಳೆ ಮಾರ್ಗದಲ್ಲಿ ಮತ್ತೆ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ. ಇಂದು ಬೆಳಗ್ಗೆ 9 ಗಂಟೆಯ ನಂತರ ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ರೈಲುಗಳು ಸಂಚರಿಸಿದವು.

ಬೆಂಗಳೂರು: ನೇರಳೆ ಮಾರ್ಗದಲ್ಲಿ ಮತ್ತೆ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ. ಇಂದು ಬೆಳಗ್ಗೆ 9 ಗಂಟೆಯ ನಂತರ ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ  ರೈಲುಗಳು ಸಂಚರಿಸಿದವು.

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ನಡೆಯುತ್ತಿದ್ದ  ದುರಸ್ತಿ ಕಾಮಗಾರಿಯ ವೇಗವನ್ನು ಹೆಚ್ಚಿಸಲು  ಇಂದಿರಾ ನಗರ-ಮಹಾತ್ಮಾ ಗಾಂಧಿ ರಸ್ತೆ ವರೆಗಿನ ಮೆಟ್ರೋ ಸಂಚಾರವನ್ನು ಡಿಸೆಂಬರ್ 28 ರಿಂದ  ನಿನ್ನೆಯವರೆಗೂ ಬಿಎಂಆರ್ ಸಿಎಲ್ ಸ್ಥಗಿತಗೊಳಿಸಿತ್ತು.

ಸೋಮವಾರ ರಾತ್ರಿ ಮೆಟ್ರೋ ನಿಗಮದ ಸಿಬ್ಬಂದಿ ಪ್ರಾಯೋಗಿ ಸಂಚಾರ  ನಡೆಸಿ ಮಾರ್ಗದ ಸುರಕ್ಷತೆ ಖಾತ್ರಿ ಪಡಿಸಿಕೊಂಡು ಇಂದು ಮಧ್ಯಾಹ್ನದ 1 ಗಂಟೆಯ ನಂತರ ರೈಲುಗಳು ಸಂಚರಿಸಲಿವೆ ಎಂದು ಹೇಳಲಾಗಿತ್ತು. ಆದರೆ, ಸುರಕ್ಷಿತ ಎಂದು ಖಾತ್ರಿಯಾದ  ಕಾಣ ಬೆಳಗ್ಗೆಯಿಂದಲೂ  ರೈಲುಗಳನ್ನು ಓಡಿಸಲಾಗುತ್ತಿದೆ.

ನೇರಳೆ ಮಾರ್ಗದಲ್ಲಿ ಮಾರ್ಗದ ಸುರಕ್ಷತಾ ಪರೀಕ್ಷೆ ನಡೆಯುತ್ತಿದೆ. ನಗರದಲ್ಲಿ  ಉಳಿದೆಲ್ಲ ಪಿಲ್ಲರ್ ಹಾಗೂ ವಯಾಡಕ್ಟ್ ಗಳ ತಾಂತ್ರಿಕ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ದೋಷ ಕಂಡುಬಂದಲ್ಲಿ ತಕ್ಷಣ ಸರಿಪಡಿಸಲಾಗುವುದು ಎಂದು ಮೆಟ್ರೋ ನಿಗಮದ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಎಲ್. ಯಶವಂತ ಚೌಹಾಣ್ ಹೇಳಿದ್ದಾರೆ.

ಟ್ರಿನಿಟಿ ನಿಲ್ದಾಣದ ಬಳಿಯ ಪಿಲ್ಲರ್  ಮೇಲೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರ ತಂಡ ನಿಗಾ ವಹಿಸಲಿದೆ. ಈ ಪಿಲ್ಲರ್ ವಯಾಡಕ್ಟ್ ಪ್ರದೇಶದಲ್ಲಿ 27 ಸೆನ್ಸರ್ ಗಳನ್ನು ಅಳವಡಿಸಲಾಗಿದೆ. ಇವುಗಳ ಮೂಲಕ  ವಯಾಡಕ್ಟ್ ಹಾಗೂ ಅದರ ಬಾಳಿಕೆ ಸಾಮರ್ಥ್ಯವನ್ನು ಅಳೆಯಲಾಗುವುದು  ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ