ರಾಜ್ಯ

ಶ್ರೀರಾಮ, ಮಹಾತ್ಮ ಗಾಂಧಿಗೆ ಅವಮಾನ: ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಪ್ರಕರಣ ದಾಖಲು

Manjula VN
ಬೆಂಗಳೂರು: ಶ್ರೀರಾಮ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ತಮ್ಮ ಪುಸ್ತಕದಲ್ಲಿ ಅವಮಾನಿಸಿದ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ. 
ಭಗವಾನ್ ವಿರುದ್ದ ಐಪಿಸಿ ಸೆಕ್ಷನ್ 295ಎ (ಉದ್ದೇಶ ಪೂರ್ವಕವಾಗಿ ಧಾರ್ಮಿಗೆ ನಂಬಿಕೆಗೆ ಅವಮಾನ, ಅವಹೇಳನ)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಅಧಿಕಾರಿಗಳು ಹೇಳಿದ್ದಾರೆ. 
ಭಗವಾನ್ ಅವರು ಈ ಹಿಂದೆಯೇ ರಾಮ ಮಂದಿರ ಏಕೆ ಬೇಕು? ಎಂಬ ಪುಸ್ತಕವನ್ನು ಬರೆದಿದ್ದರು. ಇದೀಗ ಅದು ಎರಡನೇ ಮುದ್ರಣವನ್ನು ಕಂಡಿದೆ. ಈ ಪುಸ್ತಕದಲ್ಲಿ ವಾಲ್ಮೀಕಿ ಅವರು ಕಂಡಂತೆ ಶ್ರೀರಾಮ ದೇವರಲ್ಲ. ಆತ ಮಾಂಸ ಭಕ್ಷಣೆ ಮಾಡುತ್ತಿದ್ದ. ಮದ್ಯ ಸೇವಿಸುತ್ತಿದ್ದ. ಸ್ತ್ರೀಯರ ನೃತ್ಯವನ್ನು ವೀಕ್ಷಿಸುತ್ತಿದ್ದ ಎಂಬ ಸಾಲುಗಳನ್ನು ಬರೆಯಲಾಗಿದೆ. ಈ ಸಾಲುಗಳು ಇದೀಗ ವಿವಾದಕ್ಕೆ ಕಾರಣವಾಗಿದೆ.
ಭಗವಾನ್ ಅವರು ಬರೆದಿರುವ ಪುಸ್ತಕದ ವಿರುದ್ಧ ಬಲಪಂಥೀಯ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದು, ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ. ಮೈಸೂರಿನ ಹಿಂದೂ ಜಾಗೃತಿ ವೇದಿಕೆ ಆಧ್ಯಕ್ಷ ಜಗದೀಶ್ ಹೆಬ್ಬಾರ್ ಅವರು ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. 

ಈ ನಡುವೆ ಪ್ರಕರಣ ಸಂಬಂಧ ಮೌನ ತಾಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿರುದ್ಧ ರಾಜ್ಯ ಬಿಜೆಪಿ ತೀವ್ರ ಕಿಡಿಕಾರಿದೆ. 

ಬಿಜೆಪಿ ನಾಯಕ ಹಾಗೂ ಶಾಸಕ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದು, ರಾಜ್ಯ ಸರ್ಕಾರಕ್ಕೆ ಇದೀಗ ಎರಡು ಆಯ್ಕೆಗಳಷ್ಟೇ ಇದೆ, ಭಗವಾನ್ ಅವರನ್ನು ಜೈಲಿಗಟ್ಟಬೇಕು ಇಲ್ಲವೇ ಮಾನಸಿಕ ಅಸ್ವಸ್ಥರ ಆಸ್ಪತ್ರೆಗೆ ದಾಖಲು ಮಾಡಬೇಕೆಂದು ಹೇಳಿದ್ದಾರೆ. 
SCROLL FOR NEXT