ಸಂಗ್ರಹ ಚಿತ್ರ 
ರಾಜ್ಯ

ರಾಷ್ಟ್ರೀಯ ಅನುಮತಿ ಪಡೆದಿರುವ ಎಲ್ಲಾ ವಾಣಿಜ್ಯ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯ: ಸಾರಿಗೆ ಸಚಿವ ತಮ್ಮಣ್ಣ

ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ...

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ ವಾಣಿಜ್ಯ ವಾಹನಗಳಲ್ಲೂ ಈ ವ್ಯವಸ್ಥೆಯನ್ನು ಕಡ್ಡಾಯ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಯಶವಂತಪುರ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಸಾರ್ವಜನಿಕ ಪ್ರಯಾಣಿಕ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಚಾಲನೆ ನೀಡಿದರು. ರಸ್ತೆ ಹಾಗೂ ಹೆದ್ದಾರಿ ಸಾರಿಗೆ ಸಚಿವಾಲಯವು ಜ.1 ರಿಂದ ಅನುಮತಿ ಪಡೆಯುವ ಎಲ್ಲಾ ವಾಹನಗಳಲ್ಲೂ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿಗಳನ್ನು ಅಳಡವಿಸುವಂತೆ ಕಡ್ಡಾಯ ಮಾಡಿದೆ. ಇದೀಗ ಈ ಬಗ್ಗೆ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 
ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಇದೊಂದು ಉತ್ತಮವಾದ ಕಾರ್ಯಕ್ರಮವಾಗಿದೆ. ಹೀಗಾಗಿ ನಾವೂ ಕೂಡ ರಾಜ್ಯದಲ್ಲಿ ಈ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದೇವೆ. ಪ್ರಸ್ತುತ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುತ್ತದೆ. ವಾಹನಗಳಿಗೆ ವ್ಯವಸ್ಥೆಗಳನ್ನು ಅಳವಡಿಸಲು ಗಡುವುಗಳನ್ನೂ ನೀಡಲಾಗುತ್ತೆದ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್