ರಾಜ್ಯ

ಶಬರಿಮಲೆ ವಿವಾದ: ಕೇರಳ ರಾಜ್ಯಕ್ಕೆ ಕೆಎಸ್ಆರ್'ಟಿಸಿ ಬಸ್ ಸೇವೆ ಸ್ಥಗಿತ

Manjula VN
ಬೆಂಗಳೂರು: ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರು ಪ್ರವೇಶಿಸುವಂತಿಲ್ಲ ಎಂಬ 800 ವರ್ಷಗಳ ಸಂಪ್ರದಾಯವನ್ನು ಇಬ್ಬರು ಮಹಿಳೆಯರು ಉಲ್ಲಂಘಿಸಿದ ಹಿನ್ನಲೆಯಲ್ಲಿ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಿಂದ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಕೆಎಸ್ಆರ್'ಟಿಸಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. 
ಇಬ್ಬರು ಮಹಿಳೆಯರು ದೇಗುಲ ಪ್ರವೇಶಿಸಿದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿರುವ ಹಲವು ಸಂಘಟನೆಗಳು ಬಂದ್ ಗೆ ಕರೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕೇರಳ ರಾಜ್ಯಕ್ಕೆ ಕೆಎಸ್ಆರ್'ಟಿಸಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. 
ಈ ಕುರಿತಂತೆ ಕೆಎಸ್ಆರ್'ಟಿಸಿ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಂಗಳೂರಿನಿಂದ ಪ್ರತೀನಿತ್ಯ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮಂಗಳೂರಿನಿಂದ ಕೇರಳ ತೆರಳುತ್ತಿದ್ದ 40 ಬಸ್ ಗಳ ಸೇವೆ ಹಾಗೂ ಇತರೆ ಪ್ರದೇಶಗಳಿಂದ ತೆರಳುತ್ತಿದ್ದ 20 ಬಸ್ ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.
SCROLL FOR NEXT