ರಾಜ್ಯ

ಧಾರವಾಡ: 84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ

Lingaraj Badiger
ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಚಾಲನೆ ನೀಡಿದರು.
ಸಿಎಂ ಕುಮಾರಸ್ವಾಮಿ ಅವರು ದೀಪ ಬೆಳಗಿಸುವ ಮೂಲಕ ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ ಅಕ್ಷರ ಜಾತ್ರೆಗೆ ವಿಧ್ಯುಕ್ತ ಚಾಲನೆ ನೀಡಿದರು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ, ರಾಜ್ಯದ ಸರ್ಕಾರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲಾಗುತ್ತಿದ್ದು, ಈ ಕುರಿತು ಸಾಧಕ-ಬಾಧಕಗಳ ಕುರಿತು ಮುಕ್ತ ಚರ್ಚೆಗೆ ಸಿದ್ಧ ಎಂದರು.
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಕುರಿತಂತೆ ರಚನಾತ್ಮಕ ಸಲಹೆಗಳು ಬರಲಿ. ಇದನ್ನು ಸರ್ಕಾರ ಮುಕ್ತ ಮನದಿಂದ ಸ್ವಾಗತಿಸುತ್ತದೆ ಎಂಬ ವಿಷಯವನ್ನು ಸಮ್ಮೇಳನದ ಮುಂದಿಡಲು ಬಯಸುತ್ತೇನೆ ಎಂದರು.
ಇದಕ್ಕು ಮುನ್ನ ಕರ್ನಾಟಕ ಮಹಾವಿದ್ಯಾಲಯದ ಆವರಣದಲ್ಲಿ ಸಮ್ಮೇಳನದ ಪ್ರಮುಖ ಘಟ್ಟವಾದ ಅಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಲಾಯಿತು. ಅಧ್ಯಕ್ಷರಾದ ಡಾ.ಚಂದ್ರಶೇಖರ್ ಕಂಬಾರ ಅವರು ಕರ್ನಾಟಕ ಮಹಾವಿದ್ಯಾಲಯದ ಸಂಸ್ಥಾಪಕರಾದ ಸರ್ ಸಿದ್ದಪ್ಪ ಕಂಬಳಿ, ಅರಟಾಳ್ ರುದ್ರಗೌಡರು ಹಾಗೂ ರೊದ್ದ ಶ್ರೀನಿವಾಸ್ ರಾಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅಲಂಕೃತ ಸಾರೋಟಿನಲ್ಲಿ ಆಸೀನರಾದರು.
SCROLL FOR NEXT