ಬೆಂಗಳೂರು: ಪ್ರತಿನಿತ್ಯ ತಾವು ಓಡಾಡೋ ಮಾರ್ಗದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ, ನಾನು ಸಾರ್ವಜನಿಕರಂತೆ ಟ್ರಾಫಿಕ್ ನಿಯಮ ಪಾಲಿಸುತ್ತೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಎಂ.ಬಿ ಪಾಟೀಲ್ ಸರಳತೆ ಮೆರೆದಿದ್ದಾರೆ.
ಝೀರೊ ಟ್ರಾಫಿಕ್ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಇದು ನನಗೆ ಇಷ್ಟವಿಲ್ಲ. ಸಾರ್ವಜನಿಕರಂತೆ ನಾನು ಕೂಡ ಟ್ರಾಫಿಕ್ ನಿಯಮ ಪಾಲಿಸುತ್ತೇನೆ ಎಂದಿದ್ದಾರೆ.
ತಮ್ಮ ವಾಸ್ತವ್ಯದ ಸ್ಥಳದಲ್ಲಿ ಮತ್ತು ಕಾರ್ಯಕ್ರಮಗಳ ಸ್ಥಳಗಳಲ್ಲಿ ರಕ್ಷಣೆಗಾಗಿ ಅನವಶ್ಯಕ ಸಿಬ್ಬಂದಿಯನ್ನು ನಿಯೋಜನೆ ಮಾಡುವುದು ಬೇಡ ಎಂದು ತಿಳಿಸಿದ್ದಾರೆ.
ಸಚಿವರ ಸೂಚನೆ ಮೆರೆಗೆ ಗೃಹ ಇಲಾಖೆಯಿಂದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಕಮಲ್ ಪಂತ್ ಎಲ್ಲಾ ಜಿಲ್ಲೆಯ ಎಸ್ಪಿಗಳಿಗೆ ಆದೇಶ ಹೊರಡಿಸಿದ್ದಾರೆ.