ಬಾದಾಮಿ: ಜನವರಿ 21ರಿಂದ ಬನಶಂಕರಿ ಜಾತ್ರಾ ಮಹೋತ್ಸವ ಆರಂಭವಾಗುವ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಬಾದಾಮಿ ಶಾಸಕರೂ ಆಗಿರುವ ಸಿದ್ದರಾಮಯ್ಯ ಇಂದು ದೇವಾಲಯಕ್ಕೆ ಭೇಟಿ ನೀಡಿ,ಕೈಗೊಂಡಿರುವ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.
ಐತಿಹಾಸಿಕ ಪ್ರವಾಸಿ ತಾಣಗಳಾದ ಶ್ರೀಕ್ಷೇತ್ರ ಮಹಾಕೂಟ ಹಾಗೂ ಪಟ್ಟದಕಲ್ಲುಗಳಿಗೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.ಪ್ರವಾಸಿಗರೊಂದಿಗೂ ಮಾತುಕತೆ ನಡೆಸಿ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಇಂಗ್ಲೀಷ್ ನಲ್ಲಿ ಉತ್ತರಿಸುತ್ತಿದ್ದ ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಯನ್ನು ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಎಷ್ಟು ವರ್ಷದಿಂದ ಕೆಲಸ ಮಾಡುತ್ತಿದ್ದೀರಾ ಎಂದು ಕೇಳಿದಾಗ ಅಧಿಕಾರಿ ಒಂದು ವರ್ಷದಿಂದ ಕೆಲಸ ಮಾಡುತ್ತಿರುವುದಾಗಿ ಪ್ರತಿಕ್ರಿಯಿಸಿದ್ದಾರೆ.
ಒಂದು ವರ್ಷದಿಂದ ಕನ್ನಡ ಕಲಿಯದ ಬಗ್ಗೆ ಕಿಡಿಕಾರಿದ ಸಿದ್ದರಾಮಯ್ಯ, ಕಡ್ಡಾಯವಾಗಿ ಕನ್ನಡ ಕಲಿಯುವಂತೆ ಸೂಚಿಸಿದ್ದಾರೆ. ಇದಕ್ಕೆ ಯೆಸ್ ಸರ್ , ಐ, ಟ್ರೈಡ್ ಸರ್ ಎಂದು ಸಮಜಾಯಿಸಿ ನೀಡಲು ಮುಂದಾದ ಅಧಿಕಾರಿಗೆ ಟ್ರೈ ಮಾಡುತ್ತೀನಿ ಅಂತಾ ಹೇಳಬೇಡ, ಸ್ಟೂಪಿಡ್ ಎನ್ನುತ್ತಲೇ ಅಲ್ಲಿಂದ ನಿರ್ಗಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics