ಸಿಂಧನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಬರ ಪರಿಹಾರಕ್ಕೆ ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ

ರಾಜ್ಯದ ಬರಪೀಡಿತ ತಾಲ್ಲೂಕುಗಳಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ...

ಸಿಂಧನೂರು(ರಾಯಚೂರು): ರಾಜ್ಯದ ಬರಪೀಡಿತ ತಾಲ್ಲೂಕುಗಳಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಇದುವರೆಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿಂಧನೂರಿನಲ್ಲಿ ನಿನ್ನೆ ರಾಜ್ಯಮಟ್ಟದ ಪಶು ಮತ್ಸ್ಯ ಮೇಳ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ‌ ನೀಡಲು ಆಗಮಿಸಿದ ಅವರು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ತುಂಗಾಭದ್ರಾ ಜಲಾಶಯದಲ್ಲಿ 30 ಟಿಎಂಸಿ ಹೂಳು ತುಂಬಿಕೊಂಡಿದ್ದು, ನೀರಿನ ಸಂಗ್ರಹಣೆ ಕಡಿಮೆಯಾಗಿದೆ ಮತ್ತು ಭರ್ತಿಯಾಗುತ್ತಲೇ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದುಹೋಗುತ್ತಿರುವುದು ಗಮನಕ್ಕೆ ಬಂದಿದ್ದು, ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಶಾಶ್ವತವಾಗಿ ನಮ್ಮ‌ಜನರಿಗೆ ನಿಗದಿಪಡಿಸಿದ ಪ್ರಮಾಣದ ನೀರಿನ ಸೌಕರ್ಯ ಕಲ್ಪಿಸಲು ಸ್ವಲ್ಪ ಸಮಯವಕಾಶ ಅಗತ್ಯವಿದ್ದು, ನಮ್ಮ ಸರ್ಕಾರದಿಂದ ತುಂಗಾಭದ್ರಾ ಜಲಾಶಯದ ವಿಷಯದಲ್ಲಿ ಶಾಶ್ವತ ಸೌಲಭ್ಯ ಒದಗಿಸಿಕೊಡಲಾಗುವುದು ಎಂದರು.

ದೇಶದಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಕೆಯಾಗುವ ನಿಟ್ಟಿನಲ್ಲಿ ಅಂತರ್ ರಾಜ್ಯ ನದಿ ಜೋಡಣೆ ಸೇರಿದಂತೆ ವಿವಿಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ತೈಲ ಬೆಲೆ ಏರಿಕೆ ಮತ್ತು ಸುಂಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಅವರು, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬೆಲೆಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆ ಎಂದು ಸಮರ್ಥಿಸಿಕೊಂಡರು.

ಸಾರಿಗೆ ನಿಗಮಗಳು ಸಂಕಷ್ಟದಲ್ಲಿರುವ ಕಾರಣ ನಿಗಮಗಳು 6 ತಿಂಗಳುಗಳ ಹಿಂದೆ ಬೆಲೆ ಏರಿಕೆ ಕುರಿತು ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದಿಸಬೇಕಾಗಿದೆ ಎಂದರು. ಹೆಲಿಪ್ಯಾಡ್ ನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಗೌರವ ವಂದನೆ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ