ಸಂಗ್ರಹ ಚಿತ್ರ 
ರಾಜ್ಯ

ಕಾರವಾರ: ಭಾರತ್ ಬಂದ್ ವೇಳೆ ಪ್ರತಿಭಟನೆ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆ ಸಾವು

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು....

ಕಾರವಾರ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.
ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ (57)  ಎಂಬಾಕೆ ಮೃತರಾಗಿದ್ದಾರೆ. ಇವರು ಮುಂಡಗೋಡ ತಾಲೂಕು ಪಂಚಾಯತ್ ಎದುರು ಪ್ರತಿಭಟನೆಯಲ್ಲಿ ನಿರತವಾಗಿದ್ದಾಗ ಹಠಾತ್ತನೆ ಕುಸಿದು ಬಿದ್ದಿದ್ದಾರೆ.
ಕುಸಿದು ಬಿದ್ದ ಶಾಂತಾ  ಅವರನ್ನು ತಕ್ಷಣವೇ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲ ನೀಡದ ಕಾರಣ ಅವರು ಮರಣಿಸಿದ್ದಾರೆ.
ವಿಷಯ ತಿಳಿದ ಆಶಾ ಕಾರ್ಯಕರ್ತೆಯರು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ  ಸಿಪಿಐ ಶಿವಾನಂದ ಚಲವಾದಿ ಸಹ ಭೇಟಿ ನೀಡಿ ಪರಿಶೀಲನೆ ನಡೆಇಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!