ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಪ್ರೊಬೇಷನರಿ ಪಿಎಸ್ಐ ಅನುಮಾನಾಸ್ಪದ ಸಾವು

ನಾಗೇನಹಳ್ಳಿ ತರಬೇತಿ ಕೇಂದ್ರದಲ್ಲಿ ಪಿಎಸ್ಐ ಪ್ರಶಿಕ್ಷಣಾರ್ಥಿಯಾಗಿದ್ದ ಪಿಎಸ್ಐ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ...

ಕಲಬುರಗಿ: ನಾಗೇನಹಳ್ಳಿ ತರಬೇತಿ ಕೇಂದ್ರದಲ್ಲಿ ಪಿಎಸ್ಐ ಪ್ರಶಿಕ್ಷಣಾರ್ಥಿಯಾಗಿದ್ದ ಪಿಎಸ್ಐ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. 
ಬಸವರಾಜ್ ಎಸ್ ಮಂಚೆನ್ನವರ್ ಸಾವನ್ನಪ್ಪಿರುವ ಪಿಎಸ್ಐ ಆಗಿದ್ದಾರೆ. ಅನಾರೋಗ್ಯ ಸಮಸ್ಯೆ ಹೇಳಿದ್ದ ಬಸವರಾಜ್ ಅವರು, ಹುಟ್ಟೂರಿಗೆ ಹೋಗಬೇಕೆಂದು ಶನಿವಾರ ರಜೆ ಪಡೆದುಕೊಂಡಿದ್ದರು. ರಜೆ ಮುಗಿದ ಬಳಿಕವೂ ವಾಪಸ್ಸಾಗದ ಹಿನ್ನಲೆಯಲ್ಲಿ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. 
ಹೊಸ ಜೆವರ್ಗಿ ರಸ್ತೆಯಲ್ಲಿ ಅನಾಮಧೇಯ ವ್ಯಕ್ತಿಯೊಬ್ಬರ ಮೃತದೇಹ ರಾಮ ಮಂದಿರದ ಬಳಿ ಬಿದ್ದಿರುವುದಾಗಿ ಅದಿಕಾರಿಗಳಿಗೆ ಕೆಲ ಸ್ಥಳೀಯರು ಹೇಳಿದ್ದಾರೆ. ಕೂಡಲೇ ಸ್ಥಳಕ್ಕ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಮೃತದೇಹ ಬಸವರಾಜ್ ಅವರದ್ದು ಎಂಬುದಾಗಿ ತಿಳಿದುಬಂದಿದೆ. 
ಮೃತದೇಹದ ಬಾಯಿಯಿಂದ ನೊರೆ ಬಂದಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಬೆನಕನಹಳ್ಳಿ ಗ್ರಾಮಕ್ಕೆ ಕರೆದೊಯ್ಯಲಾಗಿದ್ದು, ಸೋಮವಾರ ಅಂತಿಮ ಸಂಸ್ಕಾರ ನಡೆಸಲಾಗಿದೆ. ಪ್ರಕರಣ ಸಂಬಂಧ ಸಚಿವ ಪ್ರಿಯಾಂಕಾ ಖರ್ಗೆಯವರು ಮೃತ ಪಿಎಸ್ಐ ಬಸವರಾಜ್ ಅವರ ಕುಟುಂಬಗಕ್ಕೆ ರೂ.50 ಸಾವಿರ ಪರಿಹಾರ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ