ರಾಜ್ಯ

ಕಲಬುರಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಇಳಿಮುಖ

Sumana Upadhyaya

ಕಲಬುರಗಿ: ಕಳೆದ ವರ್ಷ ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಕಲಬುರಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ 2017ಕ್ಕೆ ಹೋಲಿಸಿದರೆ ಶೇಕಡಾ 50ರಷ್ಟು ಕಡಿಮೆಯಾಗಿದೆ. ಅಧಿಕೃತ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಕಳೆದ ವರ್ಷ ಏಪ್ರಿಲ್ 1ರಿಂದ ಡಿಸೆಂಬರ್ 31ರವರೆಗೆ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು 2017ರಲ್ಲಿ ಈ ಸಂಖ್ಯೆ 60 ಆಗಿತ್ತು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಿತೇಂದ್ರಕುಮಾರ್ ಸುಗರ್, ಕಳೆದ 9 ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ 35 ರೈತರಲ್ಲಿ 29 ಕೇಸುಗಳ ವಿಲೇವಾರಿ ಮಾಡಲಾಗಿದೆ. 20 ರೈತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಉಳಿದವರಿಗೆ ಪರಿಹಾರ ನೀಡಬೇಕಾಗಿದೆ. 2017ರಲ್ಲಿ 60 ಮಂದಿ ಆತ್ಮಹತ್ಯೆ ಮಾಡಿಕೊಂಡ ರೈತರಲ್ಲಿ 53 ಕುಟುಂಬಗಳಿಗೆ ಪರಿಹಾರ ನೀಡಲಾಗಿದ್ದು ಉಳಿದ 7 ಮಂದಿಗೆ ಪರಿಹಾರಗಳನ್ನು ತಿರಸ್ಕರಿಸಲಾಗಿತ್ತು ಎಂದರು.

ಕಂದಾಯ ಮತ್ತು ಕೃಷಿ ಇಲಾಖೆಗಳು ಕೈಗೊಳ್ಳುವ ಅರಿವು ಜಾಗೃತಿ ಕಾರ್ಯಕ್ರಮಗಳಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಸಂಖ್ಯೆ ಕಡಿಮೆಯಾಗುತ್ತಿದೆ.  ರೈತರಿಗೆ ಕೃಷಿ ಉತ್ಪನ್ನಗಳ ಮಾರುಕಟ್ಟೆ, ಸಾಲ ನೀಡಿಕೆ, ಬೆಳೆ ವಿಮೆ, ರೈತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿಕೆ ಬಗ್ಗೆ ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

SCROLL FOR NEXT