ಮಂಗಳೂರು: ಸೇತುವೆಯಿಂದ ನದಿಗುರುಳಿದ ಬೊಲೆರೋ, ಮಹಿಳೆ ಮೃತ್ಯು 
ರಾಜ್ಯ

ಮಂಗಳೂರು: ಸೇತುವೆಯಿಂದ ನದಿಗುರುಳಿದ ಬೊಲೆರೋ, ಮಹಿಳೆ ಸಾವು

ಬೊಲೆರೋ ಜೀಪ್ ಒಂದು ಸೇತುವೆಯಿಂದ ನದಿಗುರುಳಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಬಳಿಯ ಸಂಕಲಕರಿಯದಲ್ಲಿ ನಡೆದಿದೆ.

ಮಂಗಳೂರು: ಬೊಲೆರೋ ಜೀಪ್ ಒಂದು ಸೇತುವೆಯಿಂದ ನದಿಗುರುಳಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಬಳಿಯ ಸಂಕಲಕರಿಯದಲ್ಲಿ ನಡೆದಿದೆ.
ಡಯಾನ(45) ಎಂಬಾಕೆ ಘಟನೆಯಲ್ಲಿ ದುರ್ಮರಣಕ್ಕೀಡಾಗಿದ್ದು ಈಕೆ ಕಾರ್ಕಳದ ಬೋಳ ಗ್ರಾಮ ನಿವಾಸಿ ಎಂದು ಗುರುತಿಸಲಾಗಿದೆ. ಇದೇ ವೇಳೆ ಇತರೆ ಮೂವರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.
ಇನ್ನು ಜೀಪಿನಲ್ಲಿ ಮೃತ ಮಹಿಳೆಯ ಪತಿ ಸ್ಟ್ಯಾನಿ ಮಸ್ಕರೇನಸ್ ಹಾಗೂ ಮಕ್ಕಳಾದ ಶೆಲ್ಚನ್ ಹಾಗೂ ಶಮೀದ್ ಇದ್ದರು. ಸ್ಟ್ಯಾನಿಯೇ ವಾಹನ ಚಾಲನೆ ಮಾಡುತ್ತಿದ್ದರೆನ್ನಲಾಗಿದ್ದು ಇವರೆಲ್ಲರೂ ಬೋಳ ಗ್ರಾಮದಿಂದ ಮಂಗಳೂರಿಗೆ ವಿವಾಹ ಕಾರ್ಯಕ್ರಮಕ್ಕಾಗಿ ಹೋಗುತ್ತಿದ್ದರು.
ಶಾಂಭವಿ ನದಿಯ ತಡೆಯಿಲ್ಲದ ಸೇತುವೆ ದಾಟುವ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಜೀಪಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾದಾಗ ಜೀಪ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ತಕ್ಷಣ ಸ್ಥಳೀಯರು ನೀರಿನಲ್ಲಿ ಮುಳುಗಿದ್ದ ಮೂವರನ್ನು ರಕ್ಷಿಸಿದ್ದಾರೆ. ಆದರೆ ಸೀಟ್ ಬೆಲ್ಟ್ ಧರಿಸಿದ್ದ ಡಯಾನಾ ಅವರ ಕಡೆಗಿದ್ದ ಡೋರ್ ಲಾಕ್ ಆಗಿದ್ದರಿಂದ ಅವರ ರಕ್ಷಣೆ ಸಾಧ್ಯವಾಗಿಲ್ಲ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT