ವಶಪಡಿಸಿಕೊಳ್ಳಲಾದ ಬೆಳ್ಳಿ ದೀಪಗಳು 
ರಾಜ್ಯ

ಅಪಾರ ಪ್ರಮಾಣದ ಬೆಳ್ಳಿ ಸಾಮಗ್ರಿ ಅಕ್ರಮ ಸಾಗಣೆ; ಕೆಎಸ್ ಆರ್ ಟಿಸಿ ಚಾಲಕ, ಕಂಡಕ್ಟರ್​ ಅಮಾನತು

ಕೆಎಸ್​ಆರ್​ಟಿಸಿ ಬಸ್ ನಲ್ಲಿ 15 ಲಕ್ಷ ರೂ.ಗೂ ಅಧಿಕ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಕೆಎಸ್ ಆರ್ ಟಿಸಿ ಸಂಸ್ಛೆ​ ಅಮಾನತು ಮಾಡಿದೆ.

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ ನಲ್ಲಿ 15 ಲಕ್ಷ ರೂ.ಗೂ ಅಧಿಕ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಕೆಎಸ್ ಆರ್ ಟಿಸಿ ಸಂಸ್ಛೆ​ ಅಮಾನತು ಮಾಡಿದೆ.
ಬೆಂಗಳೂರು- ವಿಜಯವಾಡ ಮಾರ್ಗದಲ್ಲಿ ಸಾಗುತ್ತಿದ್ದ ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ​ಕ್ಲಾಸ್​ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ. 15 ಲಕ್ಷ ಮೌಲ್ಯದ ಬೆಳ್ಳಿ ದೀಪಗಳನ್ನು ಹೊಸಕೋಟೆ ಟೋಲ್ ಬಳಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಸ್ ಸಂಖ್ಯೆ ಕೆಎ 57 ಎಫ್​ 2844 ಬಸ್ ನಲ್ಲಿ ಬೆಳ್ಳಿ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿಯನ್ನು ಆಧರಿಸಿ ಬೆಂಗಳೂರು ಕೇಂದ್ರ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಭಾಕರ್ ರೆಡ್ಡಿ ನೇತೃತ್ವದಲ್ಲಿ ಬಸ್ ಅನ್ನು ತಡೆದು ಪರಿಶೀಲನೆ ನಡಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. 
ಯಾವುದೇ ದಾಖಲೆಗಳಿಲ್ಲದೆ ಐರಾವತ ಕ್ಲಬ್​ ಕ್ಲಾಸ್​ ಬಸ್​ನಲ್ಲಿ 4 ಬ್ಯಾಗ್​ಗಳಲ್ಲಿ ಸಾಗಾಟ ಮಾಡುತ್ತಿದ್ದ ಬೆಳ್ಳಿ ದೀಪ ಇನ್ನಿತರೆ ಬೆಳ್ಳಿ ವಸ್ತುಗಳ ಮೌಲ್ಯ 15 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ. ಜಪ್ತಿಯಾಗಿರುವ ಬೆಳ್ಳಿ ಸಾಮಗ್ರಿಗಳನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಬೆಳ್ಳಿ ವಸ್ತುಗಳನ್ನು ಆಂಧ್ರಪ್ರದೇಶಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಬಸ್ ನ ಲಗೇಜ್​ ಬಾಕ್ಸ್ ​ನಲ್ಲಿಟ್ಟುಕೊಂಡು ಸಾಗಾಟ ಮಾಡುತ್ತಿದ್ದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಅಕ್ರಮದಲ್ಲಿ ಶಾಮೀಲಾಗಿದ್ದ ಬಸ್ ಚಾಲಕ, ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ.  ಈ ಬಗ್ಗೆ ಕೆ್ಎಸ್ ಆರ್ ಟಿಸಿ ಸಂಸ್ಥೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT