ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕೇಂದ್ರೀಯ ವಿವಿ ಸಿಬ್ಬಂದಿಯಿಂದ ಅತ್ಯಾಚಾರ, ಸ್ನಾತಕೋತ್ತರ ವಿದ್ಯಾರ್ಥಿನಿ ದೂರು ದಾಖಲು

ರಾಜ್ಯ ಕೇಂದ್ರಿಯ ವಿಶ್ವವಿದ್ಯಾನಿಲಯದ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಕಲಬುರಗಿ: ರಾಜ್ಯ ಕೇಂದ್ರಿಯ ವಿಶ್ವವಿದ್ಯಾನಿಲಯದ ಸಿಬ್ಬಂದಿಯೊಬ್ಬರು  ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ವಿವಿಯ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಅತ್ಯಾಚಾರ ನಡೆಸಿದರೆ , ಮತ್ತೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನರಾನಾ ಠಾಣೆಯಲ್ಲಿ ಆಕೆ ದೂರು ದಾಖಲಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ನಂತರ ಬಿಡುಗಡೆ ಮಾಡಿ ಮನೆಗೆ ಕಳುಹಿಸಿದ್ದಾರೆ.
 ದೂರು ದಾಖಲಾದ ಬಳಿಕ ಗುರು ಹಾಗೂ ಅನಿಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಆದರೆ, ಮಾಹಿತಿಯನ್ನು  ಬಹಿರಂಗಪಡಿಸುವುದಿಲ್ಲ ಎಂದರು.
ಮನೋಶಾಸ್ತ್ರಜ್ಞರಿಂದ ಕೌನ್ಸಿಲಿಂಗ್ ನಡೆಸಿದ ನಂತರ ಸಂತ್ರಸ್ತೆಯನ್ನು ಅವರ ಪೋಷಕರು ಊರಿಗೆ ಕರೆದುಕೊಂಡು ಹೋಗಿದ್ದಾರೆ. ನಾರೊನಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ