ಮನೆಯಲ್ಲಿ ಸರಳವಾಗಿ ಹುಟ್ಟು ಆಚರಿಸಿಕೊಂಡ ಪಾಪು 
ರಾಜ್ಯ

ಧಾರವಾಡ: ನಾಡೋಜ 'ಪಾಪು'ಗೆ 100ರ ಸಂಭ್ರಮ, ಶತಮಾನೋತ್ಸವ ಮೆರವಣಿಗೆ

ಹಿರಿಯ ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ನಾಡೋಜ ಡಾ. ಪಾಟೀಲ್ ಪುಟ್ಟಪ್ಪ ಅವರು ಸೋಮವಾರ 100ನೇ ಹುಟ್ಟು ಹಬ್ಬ ಆಚರಿಸಿಕೊಂಡರು. ...

ಧಾರವಾಡ: ಹಿರಿಯ ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ನಾಡೋಜ ಡಾ. ಪಾಟೀಲ್ ಪುಟ್ಟಪ್ಪ ಅವರು ಸೋಮವಾರ 100ನೇ ಹುಟ್ಟು ಹಬ್ಬ ಆಚರಿಸಿಕೊಂಡರು. 
ಪಾಪು ಎಂದೇ ಖ್ಯಾತಿ ಪಡೆದಿರುವ ಪಾಟೀಲ್ ಪುಟ್ಟಪ್ಪ ಅವರು 99 ವಸಂತಗಳನ್ನು ಯಶಸ್ವಿಯಾಗಿ ದಾಟಿ ಶತಕದ ಹೆಜ್ಜೆ ಇಡುತ್ತಿರುವ ಹಿನ್ನಲೆಯಲ್ಲಿ ಇಂದು ಧಾರವಾಡದಲ್ಲಿ ಅದ್ಧೂರಿ ಶತಮಾನೋತ್ಸವ ಮೆರವಣಿಗೆ ನಡೆಯಿತು.
ನಗರದ ವಿದ್ಯಾವರ್ಧಕ ಸಂಘದಿಂದ ಪ್ರಾರಂಭವಾದ ಮೆರವಣಿಗೆ ಸ್ವಾಮಿ ವಿವೇಕಾನಂದ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿದ್ಯಾವರ್ಧಕ ಸಂಘಕ್ಕೆ ಬಂದು ಕೊನೆಗೊಂಡಿತು.
ಮೆರವಣಿಗೆಯುದ್ದಕ್ಕೂ ಜಗ್ಗಲಗಿ, ಡೊಳ್ಳು ಕುಣಿತ, ಕರಡಿ ಮಜಲು ಸೇರಿದಂತೆ ಸಕಲ ವಾದ್ಯಮೇಳಗಳು ಮೆರವಣಿಗೆಗೆ ಮೆರಗು ನೀಡಿದವು. 
ಇಂದು ಸಂಜೆ ಕರ್ನಾಟಕ ವಿದ್ಯಾವರ್ಧಕ ಸಂಘ ಮತ್ತು ಪಾಪು ಅಭಿಮಾನಿ ಬಳಗ ಜಂಟಿಯಾಗಿ ಪಾಪು ಅವರ ಜನ್ಮಶತಮಾನೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಆಯೋಜಿಸಿದ್ದು, ಗದಗ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು, ಮುರುಘಾಮಠ ಮಲ್ಲಿಕಾರ್ಜುನ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರದ ಮಾಜಿ ಸಚಿವ ಶರದ್ ಪವಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸಿ.ಎಸ್. ಶಿವಳ್ಳಿ ಭಾಗವಹಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel