ಬೆಂಗಳೂರು: ಹೃದಯಾಘಾತದಿಂದ ಸಾವನ್ನಪ್ಪಿದ ಯುವ ಪತ್ರಕರ್ತನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬವೊಂದು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.
ಹೌದು.. ತೀವ್ರ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ದಿಗ್ವಿಜಯ ನ್ಯೂಸ್ ಸುದ್ದಿವಾಹಿನಿಯ ಸಿಬ್ಬಂದಿ ಅಮಿತ್ ತುಬಾಚಿ (24 ವರ್ಷ) ಬುಧವಾರ ಮಧ್ಯಾಹ್ನ ನಿಧನರಾಗಿದ್ದು, ಪಾಲಕರು ಪುತ್ರನ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಯುವ ಪತ್ರಕರ್ತ ಅಮಿತ್ ಕಳೆದ ಒಂದೂವರೆ ವರ್ಷದಿಂದ ದಿಗ್ವಿಜಯ ನ್ಯೂಸ್ ಪ್ರೊಡಕ್ಷನ್ ವಿಭಾಗದಲ್ಲಿ ಪ್ರೊಡಕ್ಷನ್ ಅಸೋಸಿಯೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಮೂಲದವಾರದ ಅಮಿತ್, ಸದಾ ಲವಲವಿಕೆಯಿಂದಲೇ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಮೊನ್ನೆ ಅವರಿಗೆ ಹೃದಯಾಘಾತವಾಗಿತ್ತು. ಮೂರು ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ನೆಚ್ಚಿನ ಸಹೋದ್ಯೋಗಿ ಮಿತ್ರನಿಗೆ ದಿಗ್ವಿಜಯ ನ್ಯೂಸ್ ಮತ್ತು ವಿಜಯವಾಣಿ ಸಿಬ್ಬಂದಿ ಸಂತಾಪ ಸೂಚಿಸಿ ಕಂಬಿನಿ ಮಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics