ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅತ್ಯಾಚಾರಕ್ಕೆ ಯತ್ನಿಸಿದ ಹೆಚ್ ಆರ್ ಮ್ಯಾನೇಜರ್, ಮಹಿಳೆಯಿಂದ ದೂರು ದಾಖಲು

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಜರ್ಮನಿ ಮೂಲದ ಬಹುರಾಷ್ಟ್ರೀಯ ಕಂಪನಿಯೊಂದರ ಹೆಚ್ ಆರ್ ಮ್ಯಾನೇಜರ್ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ದಾಖಲಾಗಿದೆ

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಜರ್ಮನಿ ಮೂಲದ ಬಹುರಾಷ್ಟ್ರೀಯ ಕಂಪನಿಯೊಂದರ  ಹೆಚ್ ಆರ್ ಮ್ಯಾನೇಜರ್  ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ  ಪ್ರಕರಣ ದಾಖಲಾಗಿದೆ. 26 ವರ್ಷದ ಮಹಿಳೆಯೊಬ್ಬರು   ಈ ದೂರನ್ನು ದಾಖಲಿಸಿದ್ದಾರೆ.

ಆರೋಪಿ ಶರತ್ ಗೌಡ ವಿರುದ್ಧ   ಮಾನವ ಸಂಪನ್ಮೂಲ ಇಲಾಖೆಯ ನಿರ್ದೇಶಕರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ  ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ ಐಆರ್ ದಾಖಲಾದ ನಂತರ ಶರತ್ ಗೌಡ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸರಕು ಸಾಮಾಗ್ರಿಗಳ ಉತ್ಪಾದನಾ ಸಂಸ್ಥೆಯಲ್ಲಿ ಕಳೆದೆರಡು ವರ್ಷಗಳಿಂದ ಹೆಚ್ ಆರ್ ಕಾರ್ಯನಿರ್ವಹಕಾರಿ ಕಾರ್ಯನಿರ್ವಹಿಸುತ್ತಿದ್ದ ಶರತ್ ಗೌಡ, ಕೆಲ ತಿಂಗಳುಗಳಿಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಸಂತ್ರಸ್ತೆ, ಕೆಲಸದ ಅವಧಿಯಲ್ಲಿ ತನ್ನ ಚೇಂಬರ್ ಗೆ ಕರೆಯುತ್ತಿದ್ದ ಶರತ್ ಗೌಡ,  ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು. ಸರಿಯಾಗಿ ವರ್ತಿಸುವಂತೆ ಎಚ್ಚರಿಕೆ ನೀಡಿದ್ದೆ. ತದನಂತರ ಆತ ಬೆದರಿಕೆ ನೀಡಿ ಕಂಪನಿಯಲ್ಲಿ ತೊಂದರೆ ನೀಡುತ್ತಿದ್ದರು ಎಂದು ಆರೋಪಿಸಿದರು.
ಒಂದು ದಿನ ಬಿಬಿಎಂಪಿ ಕಚೇರಿಗೆ ಹೋಗಿರಬೇಕಾದರೆ ಮಾರ್ಗ ಮಧ್ಯ ಸಿಕ್ಕಿ ನಂದಿನಿ ಲೇಔಟ್ ನಲ್ಲಿರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಹೇಗೋ ಮನೆಯಿಂದ ಪಾರಾಗಿ ಬಂದಿದ್ದೆ. ಈ ವಿಷಯವನ್ನು ಕಂಪನಿಯಲ್ಲಿ ಬೇರೆಯವರೊಂದಿಗೆ ಹೇಳಿಕೊಂಡರೆ ಹತ್ಯೆ ಮಾಡುವುದಾಗಿ ಬೆದರಿಕೆವೊಡಿದ್ದರು ಎಂಬುದಾಗಿ ದೂರಿನಲ್ಲಿ ಆಕೆ ವಿವರಿಸಿದರು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ