ಸಿಕಂದರ್ ಮುಲ್ತಾನಿ 
ರಾಜ್ಯ

ಬೆಳಗಾವಿ: ಬೈಕ್-ಟ್ರ್ಯಾಕ್ಟರ್ ಡಿಕ್ಕಿ, ರಜೆಗೆ ಊರಿಗೆ ಬಂದಿದ್ದ ಸೈನಿಕ ದುರ್ಮರಣ!

ಟ್ರ್ಯಾಕ್ಟರ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಸೈನಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಟ್ರ್ಯಾಕ್ಟರ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಸೈನಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 
ನಾಗರಮುನ್ನೋಳಿ ಗ್ರಾಮ ನಿವಾಸಿ ಸಿಕಂದರ್ ಮುಲ್ತಾನಿ (28) ಮೃತ ಸೈನಿಕರಾಗಿದ್ದು ಇವರು 40 ದಿನಗಳ ಕಾಲ ರಜೆ ಪಡೆದು ಊರಿಗೆ ಬಂದಿದ್ದರು.
ಸಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸೈನಿಕ ಸಿಕಂದರ್ ಮುಲ್ತಾನಿ ಪಕ್ಕದ ಗ್ರಾಮಕ್ಕೆ ಜಾತ್ರೆಗೆಂದು ಹೋದವರು ತಡರಾತ್ರಿ ಹಿಂದಿರುಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸಲು ಪ್ರಯತ್ನಿಸಿದಾಗ ಬೈಕ್ ಟ್ರ್ಯಾಕ್ಟರ್ ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸಿಕಂದರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಸಿಕಂದರ್ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಆಫ್ ಸೆಂಟರ್ ಪಂಜಾಬ್ ನಲ್ಲಿ ಒಂಬತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ವಿವಾಹವಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಚಿಕ್ಕೋಡಿ ಪೊಲೀಸರುಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video