ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮೂರು ಕಡೆ ಖಾಸಗಿ ಬಸ್ ಟರ್ಮಿನಲ್ ಗೆ ಸ್ಥಳಾವಕಾಶ

ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಮತ್ತು ವಸತಿ ಪ್ರದೇಶಗಳಲ್ಲಿ ಖಾಸಗಿ ಬಸ್ಸುಗಳ ನಿಲುಗಡೆಗೆ ....

ಬೆಂಗಳೂರು: ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಮತ್ತು ವಸತಿ ಪ್ರದೇಶಗಳಲ್ಲಿ ಖಾಸಗಿ ಬಸ್ಸುಗಳ ನಿಲುಗಡೆಗೆ ಇರುವ ಸಮಸ್ಯೆ ಶೀಘ್ರವೇ ಕೊನೆಯಾಗುವ ಸಾಧ್ಯತೆಯಿದೆ.

ಬಸ್ ಟರ್ಮಿನಲ್ ಗಳ ಸ್ಥಾಪನೆಗೆ ಭೂಮಿಯನ್ನು ನೀಡಲಾಗುತ್ತಿದೆ. ಖಾಸಗಿ ಬಸ್ಸುಗಳಿಗೆ ಪ್ರತ್ಯೇಕ ಟರ್ಮಿನಲ್ ಗಳಿಗೆ ಪ್ರಸ್ತಾವನೆ ಸಲ್ಲಿಸಿರುವ ಸಾರಿಗೆ ಇಲಾಖೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ಬೈಯಪ್ಪನಹಳ್ಳಿಯಲ್ಲಿ ಭೂಮಿಯನ್ನು ನೀಡಲು ಮುಂದೆ ಬಂದಿದೆ.

ಸಾರಿಗೆ ಇಲಾಖೆ ಈ ಸಂಬಂಧ ಖಾಸಗಿ ಬಸ್ಸುಗಳು ನಗರದಲ್ಲಿ ಸಾಗುವ ದಾರಿ, ರಸ್ತೆ ಮತ್ತು ಬಸ್ಸು ತಂಗುದಾಣಗಳ ಬಗ್ಗೆ ಅಧ್ಯಯನ ನಡೆಸಿ ಈ ತಿಂಗಳ ಅಂತ್ಯಕ್ಕೆ ವರದಿ ಸಲ್ಲಿಸಲಿದೆ. ಬೈಯಪ್ಪನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಪೀಣ್ಯದಲ್ಲಿ ಇರುವ ಭೂಮಿಯ ತಪಾಸಣೆ ನಡೆಸುವಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕರ್ನಾಟಕ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಇದರಿಂದ ನಗರಕ್ಕೆ ಖಾಸಗಿ ಬಸ್ಸುಗಳು ಬಂದು ಅವುಗಳಿಂದ ಚಾಮರಾಜಪೇಟೆ, ಟಿಪ್ಪು ಸುಲ್ತಾನ ರಸ್ತೆ, ಕಲಾಸಿಪಾಳ್ಯ ಮಾರುಕಟ್ಟೆ ಮತ್ತು ಆನಂದ್ ರಾವ್ ವೃತ್ತದಲ್ಲಿ ಆಗುವ ಪಾರ್ಕಿಂಗ್ ದಟ್ಟಣೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು