ಶಾಸಕ ಕುಮಾರಸ್ವಾಮಿ ಮತ್ತು ಅವರ ಪತ್ನಿ(ಸಂಗ್ರಹ ಚಿತ್ರ) 
ರಾಜ್ಯ

ಕೋರ್ಟ್ ತೀರ್ಪು ನೀಡಿದರೂ ಪತ್ನಿಯನ್ನು ಮನೆಗೆ ಸೇರಿಸಿಕೊಳ್ಳದ ಶಾಸಕ 'ಕುಮಾರಸ್ವಾಮಿ'

ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಸಾರ್ವಜನಿಕವಾಗಿಯೇ ತಮ್ಮ ಪತ್ನಿಗೆ ಹೊಡೆದು ಕೆಲ ...

ಮೈಸೂರು: ಅಕ್ರಮ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಸಾರ್ವಜನಿಕರ ಎದುರೇ ಪತ್ನಿಗೆ ಹೊಡೆದು ಕೆಲ ವರ್ಷಗಳ ಹಿಂದೆ ಸುದ್ದಿಯಾಗಿದ್ದ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಮತ್ತೆ ಅದೇ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿದ್ದಾರೆ.

ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ಪತ್ನಿಯನ್ನು ಮನೆಯೊಳಗೆ ಸೇರಿಸುತ್ತಿಲ್ಲ ಎಂದು ಕುಮಾರಸ್ವಾಮಿಯವರ ಅತ್ತೆ ಆರೋಪಿಸಿದ್ದಾರೆ. ಅನೈತಿಕ ಸಂಬಂಧ ಹೊಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ 2016ರಲ್ಲಿ ಸಾರ್ವಜನಿಕರ ಎದುರೇ ಕುಮಾರಸ್ವಾಮಿಯವರು ಪತ್ನಿಗೆ ಹೊಡೆದಿದ್ದರು.

ನಂತರ ವಿಚ್ಛೇದನಕ್ಕೆ ಕೋರಿ ಕುಮಾರಸ್ವಾಮಿಯವರ ಪತ್ನಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟವಾಗಿ ಒಂದು ತಿಂಗಳೊಳಗೆ ಪತ್ನಿಯನ್ನು ಮನೆಗೆ ಸೇರಿಸಬೇಕೆಂದು ತೀರ್ಪು ಕೊಟ್ಟಿತ್ತು. ಆದರೆ ತೀರ್ಪು ಪ್ರಕಟವಾಗಿ ಮೂರು ತಿಂಗಳು ಕಳೆದರೂ ಪತ್ನಿಯನ್ನು ಶಾಸಕ ಕುಮಾರಸ್ವಾಮಿ ಮನೆಗೆ ಸೇರಿಸಿಕೊಂಡಿಲ್ಲ.

ನಾವು ಪಕ್ಷದ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತು ಕೆ ಎಸ್ ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಶಾಸಕರ ಪತ್ನಿಯ ತಾಯಿ ಪ್ರೇಮಕುಮಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅದಕ್ಕಾಗಿ ಇನ್ನು ವಿಧಾನಸಭಾಧ್ಯಕ್ಷರ ಬಳಿಗೆ ತೆರಳಿ ದೂರು ನೀಡುತ್ತೇವೆ ಅಲ್ಲದೆ ಕುಮಾರಸ್ವಾಮಿ ಮತ್ತು ಬಿ ಎಸ್ ಯಡಿಯೂರಪ್ಪ ಅವರ ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT