ಸಂಗ್ರಹ ಚಿತ್ರ 
ರಾಜ್ಯ

ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತಸಾಗರ, ಭಾರಿ ಭದ್ರತೆ

ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಲಿಂಗೈಕ್ಯರಾಗಿದ್ದು, ಶ್ರೀಗಳ ದರ್ಶನಕ್ಕಾಗಿ...

ತುಮಕೂರು: ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಲಿಂಗೈಕ್ಯರಾಗಿದ್ದು, ಶ್ರೀಗಳ ದರ್ಶನಕ್ಕಾಗಿ ಭಕ್ತಸಾಗರವೇ ಹರಿದು ಬರುತ್ತಿದೆ.
ಮಠದ ಆವರಣದಲ್ಲಿರುವ ಗೋಶಾಲಾ ವೇದಿಕೆಯಲ್ಲಿ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದ್ದು, ವೇದಿಕೆ ಸುತ್ತಮುತ್ತ ಸುಮಾರು ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ಮಠಕ್ಕೆ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬರುತ್ತಿದ್ದು, ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ರಾಷ್ಟ್ರೀಯ ಹೆದ್ದಾರಿ 4, ಖ್ಯಾತಸಂದ್ರ ಸರ್ಕಲ್ ವರೆಗಿನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಬಿ ದಯಾನಂದ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಮಠದ ಸುತ್ತ ಒಟ್ಟು 3,500 ಪೊಲೀಸರನ್ನು ನಿಯೋಜಿಸಲಾಗಿದೆ. 30 ಕೆಎಸ್ ಆರ್ ಪಿ ತುಕಡಿ, 26 ಶಶಾಸ್ತ್ರ ಪೊಲೀಸ್ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಐಜಿಪಿ ಹೇಳಿದ್ದಾರೆ.
ನಾಳೆ ಮಧ್ಯಾಹ್ನ 3ಗಂಟೆವರೆಗೆ ಸಾರ್ವಜನಿಕರಿಗೆ, ಭಕ್ತರಿಗೆ ಶ್ರೀಗಳ ಲಿಂಗಶರೀರದ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಸರ್ಕಾರ ತುಮಕೂರು ಸುತ್ತಮುತ್ತ ಜನರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೀಘ್ರದಲ್ಲೇ ಶಾಲೆಗಳ ಟೈಮ್ ಬದಲು? ಟ್ರಾಫಿಕ್ ಕಿರಿಕಿರಿ ತಪ್ಪಿಸಲು ವೇಳಾಪಟ್ಟಿ ಬದಲಾವಣೆಗೆ ಸರ್ಕಾರದ ಚಿಂತನೆ

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran