ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ
ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ.
ತುಮಕೂರು: ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ.
ಶಿವಕುಮಾರ ಸ್ವಾಮೀಜಿ ಅವರು ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ಗಂಗಮ್ಮನವರಿಗೆ ಎಪ್ರಿಲ್ 1, 1907ರಲ್ಲಿ 13ನೇ ಮಗುವಾಗಿ ಜನಿಸಿದರು.
ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನು ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.
ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ 3 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾ ಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ಅಂತಿಮ ದರ್ಶನ ಪಡೆಯುವ ಭಕ್ತರಿಗೆ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ಒದಗಿಸಲಾಗುವುದು ಎಂದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.