ಶ್ರೀಮಠದಲ್ಲಿ ಸಿಎಂ ಸಭೆ 
ರಾಜ್ಯ

ಪರಮಪೂಜ್ಯ ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾಗಿದ್ದಾರೆ: ಸಿಎಂ ಕುಮಾರಸ್ವಾಮಿ

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿ ಅವರು ಇಂದು ಲಿಂಗೈಕ್ಯರಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿ ಅವರು ಇಂದು ಲಿಂಗೈಕ್ಯರಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ವೈದ್ಯರ ಸತತ ಪರಿಶ್ರಮದ ಹೊರತಾಗಿಯೂ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ಜವರಾಯನ ಜೊತೆಯಲ್ಲಿ ಸಸತ ಹೋರಾಟ ಮಾಡಿದ್ದ ಶ್ರೀಗಳು ಇಂದು ಬೆಳಗ್ಗೆ 11.44ರಲ್ಲಿ ಲಿಂಗೈಕ್ಯರಾಗಿದ್ದಾರೆ ಎಂದು ಹೇಳಿದರು.
ಇದೇ ವೇಳೆ ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಶ್ರೀಮಠದ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಶ್ರೀಗಳ ಅಸಂಖ್ಯ ಭಕ್ತಗಣ ಶಾಂತ ರೀತಿಯಲ್ಲಿ ಅಂತಿಮ ದರ್ಶನ ಪಡೆಯಬೇಕು. ನಾಳೆ 3 ಗಂಟೆಯ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT