ಸಂಗ್ರಹ ಚಿತ್ರ 
ರಾಜ್ಯ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಮಠದತ್ತ ದೌಡಾಯಿಸುತ್ತಿರುವ ಗಣ್ಯರು

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಮಠದತ್ತ ಗಣ್ಯರ ದೌಡು

ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಿದ್ದು, ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ.  ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಮತ್ತೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದೆ. ಈಗ ಶ್ರೀಗಳಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಆದರೆ ಶ್ರೀಗಳಿಗಳಿಗೆ ನಿಶ್ಯಕ್ತಿ ಹೆಚ್ಚಾಗಿದ್ದು, ನಿನ್ನೆ ಆರ್ಯುವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. 
ಕೆಲ ದಿನಗಳ ಹಿಂದೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದರು. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿ, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದರು.
ಮಠದತ್ತ ದೌಡಾಯಿಸುತ್ತಿರುವ ಗಣ್ಯರು
ಇನ್ನು ಶ್ಗೀಗಳ ಆರೋಗ್ಯದಲ್ಲಿ ಏರುಪೇರು ವಿಚಾರ ತಿಳಿಯುತ್ತಿದ್ದಂತೆಯೇ ಮಠದತ್ತ ರಾಜಕೀಯ ಗಣ್ಯರು ದೌಡಾಯಿಸುತ್ತಿದ್ದು, ಪ್ರಸ್ತುತ ಮೈಸೂರಿನಲ್ಲಿ ಸಿಎಂ ಕುಮಾರಸ್ವಾಮಿ ಅವರು ತುಮಕೂರಿಗೆ ಆಗಮಿಸುತ್ತಿದ್ದಾರೆ. ಅಂತೆಯೇ ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೂ ಕೂಡ ಮಠದತ್ತ ದೌಡಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ