ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ 
ರಾಜ್ಯ

ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ನಮ್ಮ ಪ್ರಯತ್ನ ಮುಂದುವರೆದಿದೆ: ಡಾ.ಪರಮೇಶ್

ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.
ಇಂದು ಬೆಳಗ್ಗೆ ಶ್ರೀಮಠದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ.ಪರಮೇಶ್ ಅವರು, ಶ್ರೀಗಳ ಆರೋಗ್ಯ ಗಂಭೀರವಾಗಿದೆ. ನಿನ್ನೆ ರಾತ್ರಿ ಶ್ರೀಗಳ ರಕ್ತದೊತ್ತಡ ಮತ್ತು ಶ್ವಾಸಕೋಶದ ಏರುಪಾರಾಗಿತ್ತು. ಅಲ್ಲದೆ ಶ್ರೀಗಳ ದೇಹದಲ್ಲಿ ಪ್ರೊಟೀನ್ ಅಂಶ ತೀರಾ ಕಡಿಮೆಯಾಗಿದ್ದು ನಮ್ಮ ಪ್ರಯತ್ನ ಮುಂದುವರೆಸಿದ್ದೇವೆ ಎಂದು ಹೇಳಿದರು.
ಇನ್ನು  ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೆಳಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಮತ್ತೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದೆ. ಈಗ ಶ್ರೀಗಳಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಆದರೆ ಶ್ರೀಗಳಿಗಳಿಗೆ ನಿಶ್ಯಕ್ತಿ ತುಂಬಾ ಕಡಿಮೆ ಇದ್ದು, ಕಳೆದ ದಿನ ಆರ್ಯುವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. 
ಕೆಲ ದಿನಗಳ ಹಿಂದೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದರು. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿ, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT