ಶಿವಕುಮಾರ ಸ್ವಾಮೀಜಿ ಅಂತಿಮ ಯಾತ್ರೆ 
ರಾಜ್ಯ

ಕಾಯಕ ಯೋಗಿ ಶಿವಕುಮಾರ ಸ್ವಾಮೀಜಿ ಕ್ರಿಯಾ ಸಮಾಧಿಗೆ: ಸಿದ್ಧಗಂಗಾ ಮಠದಲ್ಲಿ ಸಿದ್ಧಪುರುಷ ಅಜರಾಮರ

ಕಾಯಕ ಯೋಗಿ, ಅನ್ನ, ಅಕ್ಷರ, ಆಶ್ರಯ ಎಂಬ ತ್ರಿವಿಧ ದಾಸೋಹದಿಂದ ಜಗತ್ತಿಗೇ ಮಾದರಿಯಾದ ಶತಾಯುಷಿ, ಶತಮಾನದ ಸಂತ ಸಿದ್ಧಗಂಗಾ....

ತುಮಕೂರು: ಕಾಯಕ ಯೋಗಿ, ಅನ್ನ, ಅಕ್ಷರ, ಆಶ್ರಯ ಎಂಬ ತ್ರಿವಿಧ ದಾಸೋಹದಿಂದ ಜಗತ್ತಿಗೇ ಮಾದರಿಯಾದ ಶತಾಯುಷಿ, ಶತಮಾನದ ಸಂತ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಂಗಳವಾರ ಸಿದ್ಧಗಂಗೆ ಮಠದಲ್ಲಿ ಲೀನವಾದರು.
ಇಂದು ಸಂಜೆ ಸಿದ್ಧಗಂಗಾ ಮಠದಲ್ಲಿ ಕ್ರಿಯಾ ಸಮಾಧಿ ಸ್ಥಳದಲ್ಲಿ 1ಲಿಂಗಾಯತ ಸಂಪ್ರದಾಯದಂತೆ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಹಾಗೂ ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಲಿಂಗ ಶರೀರದ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಇದಕ್ಕು ಮುನ್ನ ಗೋಸಾಲ ಸಿದ್ಧೇಶ್ವರ ವೇದಿಕೆಯಿಂದ ಶ್ರೀಗಳ ಲಿಂಗ ಶರೀರವನ್ನು 6 ಅಡಿ ಎತ್ತರದ ರುದ್ರಾಕ್ಷಿ ರಥದಲ್ಲಿ ಮೆರವಣಿಗೆ ಮೂಲಕ ಕ್ರಿಯಾ ಸಮಾಧಿವರೆಗೆ ತರಲಾಯಿತು. ಮೆರವಣಿಗೆಯಲ್ಲಿ 400ಕ್ಕೂ ಹೆಚ್ಚು ಸ್ವಾಮೀಜಿಗಳು ಹಾಗೂ ಸಾವಿರಕ್ಕೂ ಹೆಚ್ಚು ಗಣ್ಯರು ಭಾವಹಿಸಿದ್ದರು. 
ಅಂತಿಮ ಕ್ರಿಯಾವಿಧಿಗೆ ಮುನ್ನ ಸಕಲ ಸರ್ಕಾರ ಗೌರವಗಳನ್ನು ಶ್ರೀಗಳಿಗೆ ಸಮರ್ಪಿಸಲಾಯಿತು. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಶ್ರೀಗಳ ಭೌತಿಕ ಶರೀರಕ್ಕೆ ಪುಷ್ಪಗುಚ್ಛವಿರಿಸಿ ನಮನ ಸಲ್ಲಿಸಿದರು. ಬಳಿಕ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ನಮನ ಸಲ್ಲಿಸಿದರು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಷ್ಪನಮನ ಸಲ್ಲಿಸಿದರು. 
111 ವರ್ಷಗಳ ಸಾರ್ಥಕ ಬದುಕನ್ನು ಬಾಳಿದ ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳು ಸೋಮವಾರ ಬೆಳಗ್ಗೆ 11.45ಕ್ಕೆ ಲಿಂಗೈಕ್ಯರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT