ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ್ದ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ (ಸಂಗ್ರಹ ಚಿತ್ರ) 
ರಾಜ್ಯ

ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ಗೈರು: ಡಿಸಿಎಂ ಪರಮೇಶ್ವರ್ ಟೀಕೆ

ಕಳೆದ ಸೋಮವಾರ ಲಿಂಗೈಕ್ಯರಾದ ಶ್ರೀ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ...

ಬೆಂಗಳೂರು: ಕಳೆದ ಸೋಮವಾರ ಲಿಂಗೈಕ್ಯರಾದ ಶ್ರೀ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಲಕ್ಷಾಂತರ ಜನ ಹರಿದು ಬಂದಿದ್ದು ಭದ್ರತೆಯ ಕಾರಣಗಳಿಂದ ಅಂತಿಮ ಕ್ಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮನ ರದ್ದಾಗಿತ್ತು.

ತುಮಕೂರಿಗೆ ಪ್ರಧಾನಿ ಮೋದಿ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತಾ ದೃಷ್ಟಿಯಿಂದಾಗಿ ಅವರ ಭೇಟಿ ರದ್ದಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾಹಿತಿ ನೀಡಿ ಭದ್ರತಾ ಕಾರಣಗಳಿಂದಾಗಿ ಪ್ರಧಾನಿ ಮೋದಿ ಆಗಮಿಸುತ್ತಿಲ್ಲ ಎಂದು ಹೇಳಿದ್ದರು.

ಆದರೆ ಪ್ರಧಾನಿ ಮೋದಿಯನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರು ಸೆಲೆಬ್ರಿಟಿಗಳ ಮದುವೆಗಳು, ಸಿನಿಮಾ ನಟರನ್ನು ಭೇಟಿ ಮಾಡುತ್ತಾರೆ. ಆದರೆ ನಮ್ಮ ನಡೆದಾಡುವ ದೇವರ ಡಾ ಶಿವಕುಮಾರ ಸ್ವಾಮೀಜಿಗಳ ಅಂತಿಮ ಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಅವರಿಗೆ ಭಾರತ ರತ್ನವಾದರೂ ನೀಡಬೇಕು ಎಂದು ಮತ್ತೆ ಮನವಿ ಮಾಡುತ್ತೇನೆ ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!