ಸಾಲು ಮರದ ತಿಮ್ಮಕ್ಕ, ನೃತ್ಯಪಟು ಪ್ರಭುದೇವ, ಸರೋದ್‌ ವಾದಕ ರಾಜೀವ್‌ ತಾರಾನಾಥ್‌, ಮತ್ತು ರೋಹಿಣಿ ಗೋಡ್ಬೋಳೆ 
ರಾಜ್ಯ

ಸಾಲುಮರದ ತಿಮ್ಮಕ್ಕ ಸೇರಿ ಐವರಿಗೆ ಪದ್ಮಶ್ರೀ: 6 ಕೋಟಿ ಕನ್ನಡಿಗರಿಗೆ ಒಂದೂ ಇಲ್ಲ ವಿ'ಭೂಷಣ'!

ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೀಡುವ ಭಾರತ ರತ್ನ ಹಾಗೂ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಹೆಸರನ್ನು ...

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೀಡುವ ಭಾರತ ರತ್ನ ಹಾಗೂ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಹೆಸರನ್ನು ಶುಕ್ರವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ನಾಲ್ವರಿಗೆ ಪದ್ಮ ವಿಭೂಷಣ ಪ್ರಶಸ್ತಿ, 14 ಮಂದಿಗೆ ಪದ್ಮ ಭೂಷಣ ಮತ್ತು 94 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು, ಒಟ್ಟು 112 ಮಂದಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿದ್ದಾರೆ. 
ಕರ್ನಾಟಕದಿಂದ ಮಹಾ ಸಾಧಕಿ ಸಾಲು ಮರದ ತಿಮ್ಮಕ್ಕ, ಖ್ಯಾತ ನೃತ್ಯಪಟು ಪ್ರಭುದೇವ, ಖ್ಯಾತ ಸರೋದ್‌ ವಾದಕ ರಾಜೀವ್‌ ತಾರಾನಾಥ್‌, ಕಲೆ ಮತ್ತು ಪುರಾತತ್ವ ಶಾಸ್ತ್ರವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿದ ಸಾಧಕಿ ಶಾರದಾ ಶ್ರೀನಿವಾಸನ್‌, ಬೆಂಗಳೂರಿನ ಐಐಎಸ್‌ಸಿಯಲ್ಲಿ ಪರಮಾಣು ಭೌತಶಾಸ್ತ್ರ ಪ್ರೊಫೆಸರ್‌ ಆಗಿರುವ ರೋಹಿಣಿ ಗೋಡ್ಬೋಳೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡಿಗರು.
ವಿಪರ್ಯಾಸವೆಂದರೇ ರಾಜ್ಯಕ್ಕೆ ಈ ಬಾರಿ ಪದ್ಮವಿಭೂಷಣ, ಪದ್ಮಭೂಷಣ ವಿಭಾಗದಲ್ಲಿ ಯಾವುದೇ ಪ್ರಶಸ್ತಿ ಬಂದಿಲ್ಲ. 
ಕೇಂದ್ರ ಸರ್ಕಾರ ಈಗಲಾದರೂ ನನ್ನನ್ನು ಗುರುತಿಸಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಸಾಲಮರದ ತಿಮ್ಮಕ್ಕ ಸಂತೋಷ ವ್ಯಕ್ತ ಪಡಿಸಿದ್ದಾರೆ.ಕುದೂರಿನಲ್ಲಿ ತಿಮ್ಮಕ್ಕ 384 ಮರಗಳನ್ನು ನೆಟ್ಟು ಬೆಳೆಸಿದ್ದಾರೆ, ಎಂದು ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ಹೇಳಿದ್ದಾರೆ.
ಅವರ ಕೆಲಸವನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಚಾರ, ಅವರು ಭಾರತ ರತ್ನಕ್ಕೆ ಅರ್ಹರು ಎಂದು ಹೇಳಿದ್ದಾರೆ, ಕಳೆದ 7 ದಶಕಗಳಿಂದ ಆಕೆ ಮಾಡಿರುವ ಕೆಲಸಕ್ಕೆ ಪ್ರಶಸ್ತಿ ನೀಡುವ ಬದಲು ಸರ್ಕಾರ ಆಕೆ ಗೌರವ ಪೂರ್ಣ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಹೇಳಿದ್ದಾರೆ,. 
ಪ್ರಶಸ್ತಿಗೆ ಭಾಜನಗಾರಿರುವ ಐವರು ತಮ್ಮ ಸಂತೋಷ ವ್ಯಕ್ತ ಪಡಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಐವರು ಸಾಧಕರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ, 
ಪದ್ಮಶ್ರೀ ಹೊರತಾಗಿ ಪದ್ಮವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗೆ ರಾಜ್ಯದ ಯಾವುದೇ ಸಾಧಕರು ಆಯ್ಕೆಯಾಗಿಲ್ಲ. ದೇಶದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನವು ಸಿದ್ದಗಂಗಾ ಶ್ರೀಗಳಿಗೆ ನೀಡಲಿಲ್ಲವೆಂದು ಅನೇಕರು ಅಸಮಾಧನ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT