ಸಂಗ್ರಹ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಭೀಕರ ಅಪಘಾತ: ಬೈಕ್‍ಗೆ ಕೆಎಸ್‌ಆರ್‌ಟಿಸಿ ಡಿಕ್ಕಿ, ನವ ವಿವಾಹಿತ ದುರ್ಮರಣ!

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಬೈಕ್ ಮೇಲೆ ಬಸ್ ಹರಿಸಿ ಪರಿಣಾಮ ನವ ವಿವಾಹಿತನೊಬ್ಬ ದಾರುಣ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆಯಲ್ಲಿ ನಡೆದಿದೆ.

ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಬೈಕ್ ಮೇಲೆ ಬಸ್ ಹರಿಸಿ ಪರಿಣಾಮ ನವ ವಿವಾಹಿತನೊಬ್ಬ ದಾರುಣ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆಯಲ್ಲಿ ನಡೆದಿದೆ. 
ನವ ವಿವಾಹಿತ 26 ವರ್ಷದ ಬಾಗಲಕೋಟೆಯ ಮನೀಶ್ ಮೃತ ದುರ್ದೈವಿ. ಮನೀಶ್ ಪತ್ನಿ ಜೊತೆ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರು ಪ್ರದೇಶಕ್ಕೆ ಪ್ರವಾಸಕ್ಕಾಗಿ ಬಂದಿದ್ದರು. ಪ್ರವಾಸ ಮುಗಿಸಿ ಬೈಕ್ ನಲ್ಲಿ ವಾಪಸ್ ತೆರಳುವಾಗ ಸರಗೂರು-ಎಚ್ ಡಿ ಕೋಟೆ ರಸ್ತೆಯಲ್ಲಿ ವೇಗವಾಗಿ ಬಂದ ಸಾರಿಗೆ ಸಂಸ್ಥೆ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಮನೀಶ್ ಬೈಕ್ ಗೆ ಗುದ್ದಿದೆ. 
ಡಿಕ್ಕಿಯ ರಭಸಕ್ಕೆ ಮನೀಶ್ ಕೆಳಗೆ ಬಿದ್ದಿದ್ದಾರೆ. ಆಗ ತಲೆ ಮೇಲೆ ಬಸ್ ಚಕ್ರ ಹರಿದಿದೆ. ಪರಿಣಾಮ ಸ್ಥಳದಲ್ಲೇ ಮನೀಶ್ ಸಾವನ್ನಪ್ಪಿದ್ದಾನೆ. ಅದೃಷ್ಟವಶಾತ್ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೀಶ್ ಗೆ ಒಂದು ತಿಂಗಳ ಹಿಂದೆ ಮದುವೆಯಾಗಿದ್ದು ಪತಿಯನ್ನು ಕಳೆದುಕೊಂಡ ಪತ್ನಿಯ ಆಕ್ರಂದನ ನೋಡಿ ಸ್ಥಳೀಯರ ಕಣ್ಣುಗಳಲ್ಲೂ ನೀರು ತುಂಬಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!