ಮಹಿಳೆಯರ ಪ್ರತಿಭಟನೆ 
ರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಬೇಕು ಎಂದು ಒತ್ತಾಯಿಸಿ 4 ಸಾವಿರಕ್ಕೂ ಹೆಚ್ಚು ಮಹಿಳೆಯರು ಮಲ್ಲೇಶ್ವರಂ ಮೈದಾನದಲ್ಲಿ...

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಬೇಕು ಎಂದು ಒತ್ತಾಯಿಸಿ 4 ಸಾವಿರಕ್ಕೂ ಹೆಚ್ಚು ಮಹಿಳೆಯರು ಮಲ್ಲೇಶ್ವರಂ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಮದ್ಯ ನಿಷೇಧ ಆಂದೋಲನ ಸಂಘಟನೆಯ ಮಹಿಳೆಯರು ಇಂದು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶಿಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವಲ್ಲಿ ಯಶಸ್ವಿಯಾದರು.
ಮಹಿಳೆಯರು ಮಲ್ಲೇಶ್ವರಂ ಮೈದಾನದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಗಮಿಸಿದರು. ಆದರೆ ಪೊಲೀಸರು ಫ್ರೀಡಂ ಪಾರ್ಕ್ ಬಳಿಯೇ ಪ್ರತಿಭಟನಾಕಾರರನ್ನು ತಡೆದರು. ಇದರಿಂದ ಆಕ್ರೋಶಗೊಂಡ ಮಹಿಳೆಯರು, ನಾವು ಮುಖ್ಯಮಂತ್ರಿಗಳು ಬರುವವರೆಗೆ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದು ರಸ್ತೆಯಲ್ಲೇ ಕುಳಿತಿದ್ದಾರೆ.
ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಮಹಿಳೆಯರಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಸಾಹಿತಿ ದೇವನೂರು ಮಹದೇವ, ಮಹಿಳಾ ಸಂಘಟನೆಗಳು, ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ನೀಡಿದರು.ಅಲ್ಲದೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ಸರ್ಕಾರಕ್ಕೆ ರವಾನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ