ಮಂಗಳೂರು: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪುತ್ತೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಮತ್ತೆ ಮೂವರು ಆರೋಪಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಂದ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆ ಮೂಲಕ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ಪುತ್ತೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಆರೋಪಿಗಳನ್ನು ಗುರುನಂದನ್, ಪ್ರಜ್ವಲ್, ಕಿಶನ್, ಸುನೀಲ್ ಹಾಗೂ ಪ್ರಖ್ಯಾತ್ ಎಂದು ಗುರುತಿಸಲಾಗಿದೆ.
ಪ್ರಕರಣ ಕುರಿತು ಬುಧವಾರ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಕಾಲೇಜು ಬಿಟ್ಟ ಬಳಿಕ ಆರೋಪಿ ವಿದ್ಯಾರ್ಥಿಗಳು ಸಂಚು ರೂಪಿಸಿ, ವಿದ್ಯಾರ್ಥಿನಿಯನ್ನು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಪರಿಚಯದ ವಿದ್ಯಾರ್ಥಿಗಳು ಆಗಿದ್ದರಿಂದ ಏನನ್ನು ಪ್ರಶ್ನಿಸದೇ ಸಂತ್ರಸ್ತೆ ವಿದ್ಯಾರ್ಥಿನಿ ಅವರೊಂದಿಗೆ ತೆರಳಿದ್ದಾಳೆ. ಬಳಿಕ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿದ್ಯಾರ್ಥಿನಿಯು ದಲಿತ ಸಮುದಾಯಕ್ಕೆ ಸೇರಿದವಳಾಗಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.
ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ವಿದ್ಯಾರ್ಥಿನಿಗೆ ಅಮಲು ಪದಾರ್ಥ ನೀಡಿ ಕಾಡಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವೀಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು ಇದೀಗ ಪೋಲೀಸರು ವಿಡಿಯೋ ಮಾಡಿದವರು ಹಾಗೂ ಅದನ್ನು ಶೇರ್ ಮಾಡುವವರ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics