ರಾಜ್ಯ

ವಂಚನೆ ಪ್ರಕರಣ: ಎಂಇಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಖ್ ಬಂಧನ

Srinivasamurthy VN
ಬಳ್ಳಾರಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಪಿಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಖ್ ರನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ಲಕ್ಷಾಂತರ ಮಂದಿ ಅಮಾಯಕರಿಂದ ಬರೋಬ್ಬರಿ 3 ಸಾವಿರ ಕೋಟಿ ರೂ. ಹಣವನ್ನು ಅಕ್ರಮವಾಗಿ ಸಂಗ್ರಹಿಸಿ ಜನರಿಗೆ ಮೋಸ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಂಇಪಿ ಪಕ್ಷದ ಸಂಸ್ಥಾಪಕಿ ನೌಹೀರಾ ಶೇಖ್ ರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಹೀರಾ ಗೋಲ್ಡ್ ಕಂಪನಿಯ ನಿರ್ದೇಶಕಿ ಕೂಡ ಆಗಿರುವ ನೌಹೀರಾ ಶೇಖ್ ಜನರಿಗೆ 3,.000 ಕೋಟಿ ರೂಪಾಯಿಗಳ ವಂಚನೆ ಮಾಡಿರುವ ಆರೋಪದಲ್ಲಿ ಬಳ್ಳಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಹೈದರಾಬಾದ್ ನ ಚಂಚಲಗೂಡು ಜೈಲಿನಲ್ಲಿ ಇಷ್ಟು ದಿನ ನೌಹೀರಾ ರನ್ನು ಇರಿಸಲಾಗಿತ್ತು. 
ಪೊಲೀಸ್ ಮೂಲಗಳ ಪ್ರಕಾರ, ಸುಮಾರು 24 ಬೇನಾಮಿ ಆಸ್ತಿ ಹಾಗೂ 182 ಬ್ಯಾಂಕ್ ಖಾತೆಯನ್ನು ಹೊಂದಿದ್ದ ನೌಹೀರಾ, ಸುಮಾರು 1 ಲಕ್ಷ 72 ಸಾವಿರಕ್ಕೂ ಅಧಿಕ ಹೂಡಿಕೆದಾರರಿಂದ ಮೂರು ಸಾವಿರ ಕೋಟಿ ಹಣ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಈ ವಂಚನೆ ಬೆಳಕಿಗೆ ಬಂದ ನಂತರ ನೌಹೀರಾ ರನ್ನು ಬಂಧಿಸಲಾಗಿತ್ತು.
SCROLL FOR NEXT