ರೋಷನ್ ಬೇಗ್ 
ರಾಜ್ಯ

ಐಎಂಎ ಪ್ರಕರಣ: ಶಿವಾಜಿನಗರ ಶಾಸಕ ರೋಷನ್ ಬೇಗ್ ಎಸ್ಐಟಿ ವಶಕ್ಕೆ

ಮುಂಬೈಗೆ ಪಲಾಯನವಾಗುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದಿದ್ದಾರೆ...

ಬೆಂಗಳೂರು: ಮುಂಬೈಗೆ ಪಲಾಯನವಾಗುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.
ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ರೋಷನ್ ಬೇಗ್ ಗೆ ನೋಟೀಸ್ ನೀಡಿದ್ದರು. 
ವಿಚಾರಣೆಗೆ ರೋಷನ್ ಬೇಗ್ ಹಾಜರಾಗದೆ ತಮ್ಮ ಆಪ್ತನ ಮೂಲಕ ಜುಲೈ 25ರಂದು ವಿಚಾರಣೆಗೆ ಹಾಜರಾಗುವುದಾಗಿ ಎಸ್ಐಟಿ ಅಧಿಕಾರಿಗಳಿಗೆ ತಿಳಿಸಿದ್ದರು. 
ಆದರೆ ಇಂದು ರಾತ್ರಿ ರೋಷನ್ ಬೇಗ್ ಮುಂಬೈಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್ಐಟಿ ಅಧಿಕಾರಿ ಗಿರೀಶ್ ಅವರು ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಬೇಗ್ ರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT