ಬಂಡೆಪ್ಪ ಖಾಶೆಂಪೂರ 
ರಾಜ್ಯ

ಸಾಲಮನ್ನಾ ಯೋಜನೆ ಘೋಷಿಸಿದ ಬಳಿಕ ರಾಜ್ಯದಲ್ಲಿ 759 ರೈತರ ಆತ್ಮಹತ್ಯೆ

ರಾಜ್ಯದಲ್ಲಿ ರೈತರಿಗೆ ಸಾಲ ಮನ್ನಾ ಯೋಜನೆ ಘೋಷಣೆಯಾದ ಬಳಿಕ ಇಲ್ಲಿಯವರೆಗೆ ಒಟ್ಟು 758 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು,..

ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಸಾಲ ಮನ್ನಾ ಯೋಜನೆ ಘೋಷಣೆಯಾದ ಬಳಿಕ ಇಲ್ಲಿಯವರೆಗೆ ಒಟ್ಟು 758 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 151 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.
ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾದ ಎನ್.ರವಿಕುಮಾರ್ ಮತ್ತು ತೇಜಸ್ವಿನಿಗೌಡ ಅವರ ಚುಕ್ಕೆಗುರತಿನ ಪ್ರಶ್ನೆಗೆ ಉತ್ತರಿಸಿದ ಅವರು, ರೈತರ ಆತ್ಮಹತ್ಯೆ ಕುರಿತು ಅಧ್ಯಯನ ನಡೆಸಲು 2001 ರಲ್ಲಿ ಸರ್ಕಾರ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ನಿವೃತ್ತ ಕುಲಪತಿ ಡಾ.ಈ.ಕೆ.ವೀರೇಶ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ರೈತರ ಆರ್ಥಿಕ ಪರಿಸ್ಥಿತಿ ಸಾಮಾಜಿಕ ಮತ್ತು ಸಾಂಸಾರಿಕ ಸಮಸ್ಯೆಗಳು ಸಾಮರ್ಥ್ಯಕ್ಕೆ ಮೀರಿ ಮಾಡಿದ ಸಾಲ, ಬೆಳೆ ನಷ್ಟ ಮುಂತಾದವು ರೈತರ ಆತ್ಮಹತ್ಯೆಗೆ ಕಾರಣಗಳು ಎಂದು ವರದಿಯಲ್ಲಿ ಹೇಳಿದ್ದರು ಎಂದರು.
ರಾಜ್ಯದ ಸಹಕಾರ ಸಂಘಗಳಲ್ಲಿ ಒಂದು ಲಕ್ಷ ರೂ.ಗಳವರೆಗಿನ ಬೆಳೆ ಸಾಲ ಮನ್ನಾ ಯೋಜನೆಯಲ್ಲಿ ಇದುವರೆಗೆ 8,91,989 ರೈತರಿಗೆ 3,860.32 ಕೋಟಿ ರೂ. ಸಾಲ ಮನ್ನಾ ಅನುದಾನ ಬಿಡುಗಡೆ ಮಾಡಲಾಗಿದ್ದು, ವಾಣಿಜ್ಯ ಬ್ಯಾಂಕುಗಳಲ್ಲಿ ರೈತರ ಸಾಲಮನ್ನಾಕ್ಕೆ ಸಂಬಂಧಿಸಿದಂತೆ ಇದುವರೆಗೆ ರೈತರ ಖಾತೆಗಳಿಗೆ 5,297.31 ಕೋಟಿ ರೂ. 32 ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ಬಿಡುಗಡೆಯಾಗಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT