ಕುಖ್ಯಾತ ರೌಡಿ ಕುಣಿಗಲ್ ಗಿರಿ ಬಂಧನ
ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಬಂಧನವಾಗಿದೆ.ಸೋಮವಾರ ತಡರಾತ್ರಿ ಬೆಂಗಳೂರು ಕೋರಮಂಗಲ ಪೋಲೀಸರು ರವಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಬಂಧನವಾಗಿದೆ.ಸೋಮವಾರ ತಡರಾತ್ರಿ ಬೆಂಗಳೂರು ಕೋರಮಂಗಲ ಪೋಲೀಸರುಗಿರಿಯನ್ನು ಬಂಧಿಸಿದ್ದಾರೆ.
ಹಲವು ಪ್ರಕರಣದಲ್ಲಿ ಬೇಕಾಗಿದ್ದ ಕುಣಿಗಲ್ ಗಿರಿ ಇತ್ತೀಚೆಗೆ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.
ಕೋರಮಂಗಲದ ಪಬ್ ಒಂದರಲ್ಲಿ ಗಿರಿ ಇರುವುದರ ಕುರಿತು ಲಭಿಸಿದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೋಲೀಸರು ಕಾರ್ಯಾಚರಣೆ ನಡೆಸಿ ಅವನನ್ನು ಬಂಧಿಸಿದ್ದಾರೆ.
ಕಳೆದ ತಿಂಗಳು ತನ್ನ ಹುಟ್ಟುಹಬ್ಬಕ್ಕಾಗಿ ಆಯೋಜಿಸಿದ ಪಾರ್ಟಿ ವೇಳೆ ಸುಮಾರು 266 ನೃತ್ಯಗಾತಿಯರನ್ನು ನೃತ್ಯ ಕಾರ್ಯಕ್ರಮಕ್ಕೆ ಆಯೋಜಿಸಿದ್ದ. ಆ ವೇಳೆ ಪಬ್ ಮೇಲೆ ದಾಳಿ ನಡೆಸಿದ್ದ ಪೋಲೀಸರು ಯುವತಿಯರನ್ನು ರಕ್ಷಿಸಿದ್ದರು, ಆದರೆ ಕುಣಿಗಲ್ ಗಿರಿ ಅಲ್ಲಿಂದಲೂ ತಪ್ಪಿಸಿಕೊಂಡು ಪೋಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.