ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ, ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲೂ ಅಕ್ಟೋಬರ್‌ರೊಳಗೆ ಕಡ್ಡಾಯವಾಗಿ ಶೌಚಾಲಯಗಳನ್ನು ಹೊಂದಲೇಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಎಲ್ಲ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ನರೇಗಾ ಯೋಜನೆಯಡಿಯಲ್ಲಿ ಅಭಿಯಾನ ಕೈಗೊಂಡು ಅ.1ಕ್ಕೆ ಎಲ್ಲ ಸರಕಾರಿ ಶಾಲೆಗಳಲ್ಲೂ ಕಡ್ಡಾಯವಾಗಿ ಶೌಚಾಲಯ ಹೊಂದಿರಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
2018ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಸರಕಾರಿ (ಮತಗಟ್ಟೆಗಳೆಂದು ಗುರುತಿಸಿರುವ) ಶಾಲೆಗಳಲ್ಲಿ ಅಗತ್ಯ ಮೂಲ ಸೌಕರ್ಯಗಳಲ್ಲಿ ಒಂದಾದ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿತ್ತು.
ಹಾಗೆಯೇ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಪಟ್ಟ ಶಾಲೆಗಳ ಮುಖ್ಯೋಪಾಧ್ಯಾಯರ ಖಾತೆಗೆ ಹಣ ಜಮಾ ಮಾಡುತ್ತಾರೆ. ಆದರೆ 4 ಸಾವಿರ ಶಾಲೆಗಳಲ್ಲಿ ಶೌಚಾಲಯ ಇಲ್ಲ ಎಂದಾದ ಮೇಲೆ ಬಳಕೆ ಆಗದೇ ಇರುವ ಅನುದಾನ ಸರಕಾರಕ್ಕೆ ವಾಪಸ್ ನೀಡಬೇಕಿತ್ತು.
ಈ ಹಿನ್ನೆಲೆಯಲ್ಲಿ ಎಲ್ಲ ಉಪನಿರ್ದೇಶಕರು ಪ್ರತಿ ವಾರವೂ ಸಮೀಕ್ಷೆ ನಡೆಸಿ, ಪಟ್ಟಿ ಸಿದ್ಧಪಡಿಸಲು ಸೂಚಿಸಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಕರ್ನಾಟಕದ 48.188 ಸರ್ಕಾರಿ ಶಾಲೆಗಳಿದ್ದು, ಅದರಲ್ಲಿ 4,696 ಹೈಸ್ಕೂಲ್ ಗಳಿದ್ದು, ಒಂದರಲ್ಲೂ ಶೌಚಾಲಯ ಇಲ್ಲ, ಅದರಲ್ಲಿ 2, 847 ಬಾಲಕರು, ಹಾಗೂ 1,350 ಬಾಲಕಿಯರು ವ್ಯಾಸಂಗ ಮಾಡುತ್ತಿದ್ದಾರೆ., ಆದರೆ ಇವರಿಗೆ ಶೌಚಾಲಯವಿಲ್ಲ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos